ದೇಶಪ್ರಮುಖ ಸುದ್ದಿ

ರೈತರ ಆತ್ಮಹತ್ಯೆ ತಡೆಗೆ ಸರ್ಕಾರಗಳ ಪ್ರಯತ್ನವೇನು: ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್‍

ನವದೆಹಲಿ: ಬೆಳೆನಾಶ ಮತ್ತು ಸಾಲಭಾರದಿಂದ ರೈತರು ಸರಣಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್‍, ರೈತರ ಆತ್ಮಹತ್ಯೆ ತಡೆಯಲು ಸರ್ಕಾರಗಳು ಕೈಗೊಂಡಿರುವ ಕ್ರಮಗಳ ಕುರಿತು ವರದಿ ಕೇಳಿದೆ.

ರೈತರ ಆತ್ಮಹತ್ಯೆಗೆ ಕಾರಣ ಏನಿರಬಹುದು ಎಂಬುದನ್ನು ಪರಿಶೀಲಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು, ಕೇಂದ್ರಾಡಳಿತ ಪ್ರದೇಶಗಳ ಮುಖ್ಯಸ್ಥರು, ಆರ್‍.ಬಿ.ಐ.ಗೆ ನಾಲ್ಕುವಾರಗಳಲ್ಲಿ ಪ್ರತಿಕ್ರಿಯಿಸುವಂತೆ ಮುಖ್ಯನ್ಯಾಯಮೂರ್ತಿ ಜೆ.ಎಸ್. ಖೇಹರ್, ನ್ಯಾಯಮೂರ್ತಿ ಎನ್‍.ವಿ. ರಮಣ ಅವರಿದ್ದ ಪೀಠ ಹೇಳಿದೆ.

ಇದು ಸಾರ್ವಜನಿಕ ಹಿತಾಸಕ್ತಿಯ ವಿಚಾರ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳವ ನಿಟ್ಟಿನಲ್ಲಿ ಕೇಂದ್ರ, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳು ಪಾಲ್ಗೊಳ್ಳಬೇಕು ಎಂದು ಸುಪ್ರಿಂಕೋರ್ಟ್‍ ಪೀಠ ಹೇಳಿದೆ.

ಗುಜರಾತ್ ಸ್ವಯಂಸೇವಾ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಅರ್ಜಿಯಲ್ಲಿ ಕೃಷಿ ನೀತಿಯನ್ನು ಪುನರ್ ಪರಿಶೀಲಿಸಬೇಕು. ಬರ ಹಾಗೂ ಇತರ ಪ್ರಾಕೃತಿಕ ವಿಕೋಪಗಳು ಎದುರಾದಾಗ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂಬ ಕೋರಿಕೆಯೂ ಇದೆ. ಗುಜರಾತ್ ರಾಜ್ಯಕ್ಕೆ ಸಂಬಂಧಿಸಿ ಸಲ್ಲಿಸಿದ್ದ ಈ ಅರ್ಜಿಯ ವಿಚಾರಣೆ ನಡೆಸುತ್ತಿರುವ ಕೋರ್ಟ್‍, ದೇಶಾದ್ಯಂತ ಈ ಸಮಸ್ಯೆಗೆ ಸರ್ಕಾರಗಳು ಏನು ಕ್ರಮಕೈಗೊಂಡಿವೆ ಎಂಬುದನ್ನು ಪರಿಶೀಲಿಸಲು ಬಯಸಿದೆ.

Leave a Reply

comments

Related Articles

error: