ಪ್ರಮುಖ ಸುದ್ದಿ

ಚೌಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ತಾಯಿ ಚೌಡೇಶ್ವರಿ ದರ್ಶನ ಪಡೆದ ನಿಖಿಲ್ ಕುಮಾರಸ್ವಾಮಿ 

ರಾಜ್ಯ(ಮಂಡ್ಯ)ಮಾ.29:- ರಾಜ್ಯದ 14 ಕ್ಷೇತ್ರಗಳಿಗೆ  ನಡೆಯುವ ಮೊದಲ ಹಂತದ ಲೋಕಸಭಾ ಚುನಾವಣೆಗೆ  ಈಗಾಗಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯವಾಗಿ ಎರಡು ದಿನಗಳಾಗಿದ್ದು, ನಾಮಪತ್ರ ವಾಪಸ್ ಪಡೆಯಲು ಇಂದು ಕೊನೆಯ ದಿನವಾಗಿದೆ.

ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಪ್ರಚಾರ ಭರಾಟೆ  ಜೋರಾಗಲಿದ್ದು, ಇಂದು ಪ್ರಚಾರಕ್ಕೂ ತೆರಳುವ ಮುನ್ನ ಮಂಡ್ಯ ಲೋಕಸಭಾ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ  ಚೌಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ತಾಯಿ ಚೌಡೇಶ್ವರಿ ದರ್ಶನ ಪಡೆದಿದ್ದಾರೆ.

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹೆಮ್ಮನಹಳ್ಳಿ ಗ್ರಾಮದಲ್ಲಿರುವ ಚೌಡೇಶ್ವರಿ ದೇವಾಲಯ ವರ್ಷಕ್ಕೆ 36 ಗಂಟೆಗಳು ಮಾತ್ರ ಬಾಗಿಲು ತೆರೆಯಲಾಗುತ್ತದೆ. ನಿನ್ನೆ ಬೆಳಿಗ್ಗೆ ದೇವಾಲಯದ ಬಾಗಿಲು ತೆಗೆಯಲಾಗಿದ್ದು, ಇಂದು ಮಧ್ಯರಾತ್ರಿ  ದೇಗುಲದ ಬಾಗಿಲು ಮುಚ್ಚಲಾಗುತ್ತದೆ. ಈ ಹಿನ್ನೆಲೆ ಇಂದು ನಿಖಿಲ್ ಕುಮಾರಸ್ವಾಮಿ ಚೌಡೇಶ್ವರಿ ದೇಗುಲಕ್ಕೆ ಭೇಟಿ ನೀಡಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: