ಕರ್ನಾಟಕಪ್ರಮುಖ ಸುದ್ದಿ

ದೇವೇಗೌಡರೇ ನಾಮಪತ್ರವನ್ನು ವಾಪಸ್ಸು ಪಡೆಯಲಿ ಅಂದ್ರು ಮುದ್ದಹನುಮೇಗೌಡ್ರು!

ಬೆಂಗಳೂರು (ಮಾ.29): ದೇವೇಗೌಡರೇ ನಾಮಪತ್ರವನ್ನು ವಾಪಸ್ಸು ಪಡೆಯಲಿ ಅಂತ ತುಮಕೂರು ಲೋಕಸಭೆ ಕ್ಷೇತ್ರದಲ್ಲಿ ಬಂಡಾಯ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ ಮುದ್ದಹನುಮೇಗೌಡ ಅವರು ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾದ ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡುರಾವ್‌ ಹಾಗೂ ಪಕ್ಷದ ಹಿರಿಯ ನಾಯಕರಿಗೆ ಹೇಳಿದ್ದಾರೆ ಎನ್ನಲಾಗಿದೆ!

ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಎಸ್ ಪಿ ಮುದ್ದಹನುಮೇಗೌಡ ಅವರು ನಮ್ಮ ನಾನು ಹಿರಿಯರು, ಸ್ನೇಹಿತರ ಜೊತೆಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತೇನೆ. ವರಿಷ್ಠರ ಜೊತೆಗೆ ಮಾತುಕತೆ ನಡೆಸಿ ತುಮಕೂರಿಗೆ ತೆರಳುತ್ತೇನೆ. ಅಲ್ಲಿ ಚರ್ಚಿಸಿ ಕಣದಿಂದ ಹಿಂದೆ ಸರಿಯುವುದೋ ಅಥವಾ ಮುಂದೆ ಸಾಗುವುದೇ ಎಂದು ತೀರ್ಮಾನಕ್ಕೆ ಬರುವುದಾಗಿ ತಿಳಿಸಿದ್ದಾರೆ.

ಇದೇ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡುರಾವ್ ಅವರು ಮುದ್ದಹನುಮೇಗೌಡ ಅವರನ್ನು ಪಕ್ಷ ಮುಂಬರುವ ದಿವಸಗಳಲ್ಲಿ ಸೂಕ್ತ ರೀತಿಯಲ್ಲಿ ನಡೆಸಿಕೊಳ್ಳಲಿದೆ. ಹೀಗಾಗಿ ಪಕ್ಷದಲ್ಲಿ ಸೂಕ್ತ ರೀತಿಯಲ್ಲಿ ಪಕ್ಷದಲ್ಲಿ ಅವರಿಗೆ ಉತ್ತಮ ಸ್ಥಾನಮಾನವನ್ನು ನೀಡಲಾಗುವುದು. ಮುದ್ದಹನುಮೇಗೌಡ ಅವರು ನಾಮಪತ್ರ ಸಲ್ಲಿಸಿರುವುದರಿಂದ ಜನತೆಗೆ ಬೇರೆ ರೀತಿಯಲ್ಲಿ ಸಂದೇಶ ರವಾನೆಯಾಗುತ್ತದೆ. ಹೀಗಾಗಿ ಅವರ ಬಳಿ ನಾಮಪತ್ರವನ್ನು ವಾಪಸ್ಸು ತೆಗೆದುಕೊಳ್ಳುವ ಬಗ್ಗೆ ಮನವಿ ಮಾಡಿಕೊಳ್ಳಲಾಗಿದ್ದು, ಈ ಬಗ್ಗೆ ಅವರು ಸರಿಯಾದ ಕ್ರಮ ತೆಗೆದುಕೊಳ್ಳುತ್ತಾರೆ ಎಂಬ ಆಶಾಭಾವ ವ್ಯಕ್ತಪಡಿಇದರು. (ಎನ್.ಬಿ)

Leave a Reply

comments

Related Articles

error: