ಮೈಸೂರು

ಕಾಂಗ್ರೆಸ್ ಸೇರಲಿದ್ದಾರೆ ಜೆಡಿಎಸ್ ಮೈಸೂರು ಜಿಲ್ಲಾಧ್ಯಕ್ಷರಾಗಿ ಗುರುತಿಸಿಕೊಂಡಿದ್ದ ಕೆ ಹರೀಶ್ ಗೌಡ

ಮೈಸೂರು,ಮಾ.30:- ಮೈಸೂರು-ಕೊಡಗು ಲೋಕಸಭಾ ಚುನಾವಣಾ ಕಣ ಗರಿಗೆದರಿದ್ದು, ಈ ಹಿಂದೆ ಮೈಸೂರು ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಗುರುತಿಸಿಕೊಂಡಿದ್ದ  ಕೆ ಹರೀಶ್ ಗೌಡ ನಾಳೆ ಅಧಿಕೃತವಾಗಿ ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗಿದೆ.

ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಜೆ ಡಿ ಎಸ್ ನಿಂದ ಟಿಕೇಟ್ ಲಭಿಸದ ಕಾರಣ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು. ಚಾಮರಾಜ ಕ್ಷೇತ್ರ ಕೈ ಬಲಪಡಿಸಲು ಮಾಜಿ ಸಿಎಂ ಸಿದ್ದರಾಮಯ್ಯ ತಂತ್ರ ರೂಪಿಸಿದ್ದು, ನಾಳೆ ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆ ಪಿ ಸಿ ಸಿ ರಾಜ್ಯ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆಂದು ತಿಳಿದು ಬಂದಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: