ಕರ್ನಾಟಕಪ್ರಮುಖ ಸುದ್ದಿ

ಬಿಜೆಪಿ 22 ಸ್ಥಾನ ಗೆದ್ರೆ ರಾಜ್ಯ ಸರ್ಕಾರಕ್ಕೆ ಆಪತ್ತು ಅಂದ್ರು ಮೊಯ್ಲಿ!

ಚಿಕ್ಕಬಳ್ಳಾಪುರ (ಮಾ.30): ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 22 ಸ್ಥಾನ ಕೊಟ್ಟರೆ ಮರುದಿನವೇ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಮನೆಗೆ ಹೋಗ್ತಾರೆ ಎಂದು ಮೈತ್ರಿ ಅಭ್ಯರ್ಥಿ ವೀರಪ್ಪ ಮೊಯ್ಲಿ ಎಚ್ಚರಿಕೆ ನೀಡಿದ್ದಾರೆ.

ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ವೀರಪ್ಪ ಮೊಯ್ಲಿ, ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಹಾಗೂ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗುವ ಕನಸು ನನಸಾಗದಂತೆ ಮಾಡಲು ಕಾಂಗ್ರೆಸ್ ಗೆ ಮತ ನೀಡಬೇಕು ಎಂದು ವೀರಪ್ಪ ಮೊಯ್ಲಿ ಹೇಳಿದ್ದಾರೆ. ಬಿ.ಎಸ್ ಯಡಿಯೂರಪ್ಪ ಅವರ ಕಣ್ಣು ಸಿಎಂ ಕುರ್ಚಿ ಮೇಲೆ ಬಿದ್ದಿದೆ. ಅದಕ್ಕಾಗಿ ಅವರು ಒಂದಲ್ಲಾ ಒಂದು ರೀತಿಯಲ್ಲಿ ಸಮ್ಮಿಶ್ರ ಸರ್ಕಾರವನ್ನು ಉರುಳಿಸುವ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ಅವಕಾಶ ಕೊಡಬಾರದು ಎಂದರು. (ಎನ್.ಬಿ)

Leave a Reply

comments

Related Articles

error: