ಕರ್ನಾಟಕಪ್ರಮುಖ ಸುದ್ದಿ

ಶಿವಕುಮಾರ ಶ್ರೀಗಳ 112ನೇ ಜಯಂತ್ಯುತ್ಸವ

ತುಮಕೂರು (ಏ.1): ನಡೆದಾಡುವ ದೇವರು ಎಂದು ಭಕ್ತರು ಕರೆಯುತ್ತಿದ್ದ ತುಮಕೂರು ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರ 112ನೇ ಜಯಂತ್ಯುತ್ಸವವನ್ನು ಇಂದು ಆಚರಿಸಲಾಗುತ್ತಿದೆ.

ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಬೆಳಗ್ಗೆಯಿಂದಲೇ ಗದ್ದುಗೆ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನ, ಪೂಜಾ ಕೈಂಕರ್ಯಗಳು ನಡೆದಿವೆ. ಮೈಸೂರು ಮಹಾರಾಜ ಯದುವೀರ್ ಒಡೆಯರ್ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ವಿವಿಧ ಮಠಾಧೀಶರು, ಗಣ್ಯರು ಭಾಗವಹಿಸಲಿದ್ದಾರೆ.

ಶ್ರೀ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ಬಳಿಕ ನಡೆಯುತ್ತಿರುವ ಮೊದಲ ಜಯಂತ್ಯುತ್ಸವ ಇದಾಗಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಲ್ಲದೆ, 112 ಮಕ್ಕಳಿಗೆ ಶ್ರೀ ಶಿವಕುಮಾರ ಸ್ವಾಮೀಜಿ ಹೆಸರನ್ನು ನಾಮಕರಣ ಮಾಡಲಾಗುವುದು. (ಎನ್.ಬಿ)

Leave a Reply

comments

Related Articles

error: