ಪ್ರಮುಖ ಸುದ್ದಿ

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಉಮೇಶ್ ಜಾಧವ್  ರಾಜೀನಾಮೆ ಅಂಗೀಕಾರ

ರಾಜ್ಯ(ಬೆಂಗಳೂರು)ಏ.1:- ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಉಮೇಶ್ ಜಾಧವ್  ಅವರ ರಾಜೀನಾಮೆ ಅಂಗೀಕಾರವಾಗಿದೆ.

ಸ್ಪೀಕರ್ ರಮೇಶ್ ಕುಮಾರ್  ಉಮೇಶ್ ಜಾಧವ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಕಲ್ಬುರ್ಗಿ ಜಿಲ್ಲೆಯ ಚಿಂಚೊಳಿ ಕಾಂಗ್ರೆಸ್ ಶಾಸಕರಾಗಿದ್ದ ಉಮೇಶ್ ಜಾಧವ್ ಸಮ್ಮಿಶ್ರ ಸರ್ಕಾರದ ವಿರುದ್ದ ಅಸಮಾಧಾನಗೊಂಡು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ನಂತರ ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.  ಹಾಗೆಯೇ ಇದೀಗ ಲೋಕಸಭಾ ಚುನಾವಣೆಯಲ್ಲಿ ಕಲ್ಬುರ್ಗಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಉಮೇಶ್ ಜಾಧವ್ ಕಣಕ್ಕಿಳಿದಿದ್ದಾರೆ.  ಉಮೇಶ್ ಜಾದವ್ ವಿರುದ್ಧ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸದಂತೆ  ದೂರು ನೀಡಿದ್ದರು. ಅಲ್ಲದೆ ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ದೂರು ಸಲ್ಲಿಕೆಯಾಗಿತ್ತು.

ಈ ಬಗ್ಗೆ ಸ್ಪೀಕರ್ ರಮೇಶ್ ಕುಮಾರ್ ವಿಚಾರಣೆ ನಡೆಸಿದ್ದರು.  ಆದರೆ ಇದೀಗ ಉಮೇಶ್ ಜಾಧವ್ ಅವರ ರಾಜೀನಾಮೆಯನ್ನು ಸ್ಪೀಕರ್ ರಮೇಶ್ ಕುಮಾರ್ ಅಂಗೀಕರಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: