ಮೈಸೂರು

ಆರೋಪದಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಕರಣದಿಂದ ಮಾಜಿ ಸಚಿವ ಎಸ್.ಎ.ರಾಮದಾಸ್ ಖುಲಾಸೆ

ಮೈಸೂರು,ಏ.2:- ಮಹಿಳೆಯೋರ್ವರ ಆರೋಪದಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಕರಣದಿಂದ ಮಾಜಿ ಸಚಿವ ಎಸ್.ಎ.ರಾಮದಾಸ್ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದೆ.

2014ರಲ್ಲಿ ಪ್ರೇಮಕುಮಾರಿ ಎಂಬವರು ರಾಮದಾಸ್ ನನ್ನನ್ನು ಪ್ರೀತಿಸಿ ವಂಚಿಸಿದ್ದಾರೆಂದು ಆರೋಪಿಸಿದ್ದರು. ಇದರಿಂದ ಮನನೊಂದ ರಾಮದಾಸ್ 2014ರ ಫೆ.11ರಂದು ಆತ್ಮಹತ್ಯೆಗೆ ಯತ್ನಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಮೈಸೂರಿನ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು. ಸಿಐಡಿ ಪೊಲೀಸರು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿದ್ದು, ನ್ಯಾಯಾಲಯ ಅವರನ್ನು ಆರೋಪದಿಂದ ಖುಲಾಸೆಗೊಳಿಸಿ ಆದೇಶಿಸಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: