ಪ್ರಮುಖ ಸುದ್ದಿಮೈಸೂರು

ಮೈಸೂರು ಅರಮನೆಗೆ ಭೇಟಿ ನೀಡಿ ರಾಜವಂಶಸ್ಥ ಯದುವೀರ್ ಒಡೆಯರ್ ಭೇಟಿಯಾದ ರಿಯಲ್ ಸ್ಟಾರ್ ಉಪೇಂದ್ರ

ಮೈಸೂರು,ಏ.2:- ಲೋಕಸಭಾ ಚುನಾವಣೆ ಹಿನ್ನೆಲೆ ರಿಯಲ್ ಸ್ಟಾರ್ ಉಪೇಂದ್ರ ಇಂದು ಮೈಸೂರಿನಲ್ಲಿ  ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ಪರವಾಗಿ  ಪ್ರಚಾರ ನಡೆಸಲಿದ್ದಾರೆ.

ಈ ನಡುವೆ ರಿಯಲ್ ಸ್ಟಾರ್ ಉಪೇಂದ್ರ ಅವರು ಪ್ರಚಾರದ ನಡುವೆ ಮೈಸೂರು ಅರಮನೆಗೆ ಭೇಟಿ ನೀಡಿ ರಾಜವಂಶಸ್ಥ ಯದುವೀರ್ ಒಡೆಯರ್ ಅವರ ಜತೆ ಮಾತುಕತೆ ನಡೆಸಿದ್ದಾರೆ.  ಚುನಾವಣಾ ಪೂರ್ವದಲ್ಲಿ ಉಪೇಂದ್ರ  ಅವರು ಯದುವೀರ್  ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.

ಪ್ರಚಾರಕ್ಕೂ ಮುನ್ನ ಉಪೇಂದ್ರ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಪಡೆದರು. ಮೈಸೂರು ಕೊಡಗು ಉತ್ತಮ ಪ್ರಜಾಕೀಯ ಪಕ್ಷದ ಆಶಾರಾಣಿ ಪರವಾಗಿ ಉಪೇಂದ್ರ ಪ್ರಚಾರ ನಡೆಸಲಿದ್ದಾರೆ. ಮೈಸೂರಿನಲ್ಲಿ ವಿವಿಧ ಭಾಗಗಳಲ್ಲಿ ಕಾಲ್ನಡಿಗೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಯ ಜೊತೆ ಉಪೇಂದ್ರ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆಂದು ತಿಳಿದು ಬಂದಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: