ದೇಶಪ್ರಮುಖ ಸುದ್ದಿ

ತ್ವರಿತ ವಿಚಾರಣೆ ಮನವಿ ತಿರಸ್ಕಾರ: ಸುಪ್ರೀಮ್‍ ಕೋರ್ಟಲ್ಲಿ ಹಾರ್ದಿಕ್ ಪಟೇಲ್‍ಗೆ ಹಿನ್ನಡೆ

ನವದೆಹಲಿ (ಏ.2): ಇಸವಿ 2015 ರ ಪಾಟೀದಾರ್ ಚಳವಳಿಯ ಸಮಯದಲ್ಲಿ ನಡೆದ ಹಿಂಸಾಚಾರ ಹಾರ್ದಿಕ್ ಪಟೇಲ್ ಅವರಿಗೆ ಭಾರೀ ತಲೆನೋವಾಗಿ ಪರಿಣಮಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾರ್ದಿಕ್ ಪಟೇಲ್ ಅವರನ್ನು ದೋಷಿ ಎಂದು ಪರಿಗಣಿಸಿ, ಎರಡು ವರ್ಷಗಳ ಜೈಲು ಶಿಕ್ಷೆವಿಧಿಸಿದ್ದ ವಿಸ್ನಗರ್ ನ್ಯಾಯಾಲಯದ ಆದೇಶಕ್ಕೆ ತಡೆ ನೀಡುವಂತೆ ಹಾರ್ದಿಕ್ ಪಟೇಲ್ ಅರ್ಜಿ ಸಲ್ಲಿಸಿದ್ದರು. ಜೊತೆಗೆ ಇದರ ತ್ವರಿತ ವಿಚಾರಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆದರೆ ಪ್ರಕರಣದ ತ್ವರಿತ ವಿಚಾರಣೆಯ ಮನವಿಯನ್ನು ಕೋರ್ಟು ತಿರಸ್ಕರಿಸಿದೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗುಜರಾತಿನ ಜಾಮ್ನಗರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಳಿಯಬೇಕಿದ್ದ ಹಾರ್ದಿಕ್ ಪಟೇಲ್ ಅವರಿಗೆೀ ಮೂಲಕ ಸುಪ್ರೀಂ ಕೋರ್ಟ್ ಸಹ ಭಾರೀ ಆಘಾತ ನೀಡಿದೆ.ಏ ಪ್ರಿಲ್ 4 ರ ವೊಳಗೆ ಹಾರ್ದಿಕ್ ಅವರ ವಿರುದ್ಧ ಗುಜರಾತಿನ ವಿಸ್ನಗರ್ ನ್ಯಾಯಾಲಯ ನೀಡಿದ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ ನೀಡದೆ ಇದ್ದಲ್ಲಿ ಈ ಬಾರಿ ಪಟೇಲ್ ಅವರ ಸಂಸತ್ ಪ್ರವೇಶದ ಕನಸು ಕನಸಾಗಿಯೇ ಉಳಿಯಲಿದೆ.

ಏಪ್ರಿಲ್ 04 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಅಷ್ಟರಲ್ಲಿ ವಿಚಾರಣೆ ನಡೆಯದೆ ಹೋದಲ್ಲಿ ಹಾರ್ದಿಕ್ ಪಟೇಲ್ ಚುನಾವಣೆಗೆ ಸ್ಪರ್ಧಿಸುವುದಿಲ್ಲ. 25 ವರ್ಷ ವಯಸ್ಸಿನ ಹಾರ್ದಿಕ್ ಪಟೇಲ್ 2017 ರ ಡಿಸೆಂಬರ್ ನಲ್ಲಿ ನಡೆದ ಗುಜರಾತ್ ವಿಧಾನಸಭೆ ಚುನಾವಣೆಯಲ್ಲೇ ಸ್ಪರ್ಧಿಸಬೇಕಿತ್ತು. ಆದರೆ ಚುನಾವಣೆಗೆ ಸ್ಪರ್ಧಿಸಲು ಬೇಕಿದ್ದ ಕನಿಷ್ಠ ವಯೋಮಿತಿ 25 ವರ್ಷ ಆಗಿರದಿದ್ದ ಕಾರಣ ಅವರು ಚುನಾವನೆಗೆ ಸ್ಪರ್ಧಿಸಿರಲಿಲ್ಲ.

2015 ರಲ್ಲಿ ನಡೆದ ಪಟೇಲ್ ಸಮುದಾಯದ ಮೀಸಲಾತಿ ಹೋರಾಟದ ಸಂದರ್ಭದಲ್ಲಿ ಹಲವು ಹಿಂಸಾಚಾರ ಪ್ರಕರಣಗಳು ನಡೆದಿದ್ದವು. ಈ ಸಂದರ್ಭದಲ್ಲಿ ಬಿಜೆಪಿ ಶಾಸಕ ಋಷಿಕೇಶ್ ಪಟೇಲ್ ಅವರ ವಿಸ್ನಗರ ಕಚೇರಿಯನ್ನು ಧ್ವಂಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾರ್ದಿಕ್ ಪಟೇಲ್ ಅವರನ್ನು ದೋಷಿ ಎಂದು ನ್ಯಾಯಾಲಯ ಪರಿಗಣಿಸಿತ್ತು. (ಎನ್.ಬಿ)

Leave a Reply

comments

Related Articles

error: