ಮೈಸೂರು

ಕೆಲಸ ಕೊಡಿಸುವುದಾಗಿ ನಂಬಿಸಿ ಹೊರರಾಜ್ಯಗಳಿಂದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ ಮೈಸೂರಿನ ವ್ಯಕ್ತಿ ಸೇರಿದಂತೆ ಮೂವರ ಬಂಧನ

ಮೈಸೂರು,ಏ.3:- ಕೆಲಸ ಕೊಡಿಸುವುದಾಗಿ ನಂಬಿಸಿ ಹೊರರಾಜ್ಯಗಳಿಂದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ ಮೈಸೂರಿನ ವ್ಯಕ್ತಿ ಸೇರಿದಂತೆ ಮೂವರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಮೈಸೂರಿನ ಇಲವಾಲದ ಕಾಶಿ(21),ಚನ್ನರಾಯಪಟ್ಟಣದ ದೀಪಕ್ ಅಲಿಯಾಸ್ ದೀಪಕ್ ಗೌಡ(30), ಹಾಗೂ ಕೆ.ಆರ್.ಪೇಟೆಯ ಪ್ರಜ್ವಲ್(21)ಎಮದು ಗುರುತಿಸಲಾಗಿದೆ. ಬೆಂಗಳೂರಿನ ಸೋಲದೇವನಹಳ್ಳಿಯ ಚಿಕ್ಕಸಂದ್ರದಲ್ಲಿರುವ ಮನೆಯೊಂದರಲ್ಲಿ ಯುವತಿಯರನ್ನು ಕೂಡಿಟ್ಟು ವೇಶ್ಯಾವಾಟಿಕೆ ನಡೆಸುತ್ತಿದ್ದರು. ಖಚಿತ ಮಾಹಿತಿಯನ್ನು ಆಧರಿಸಿ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿ ಹೊರರಾಜ್ಯದ ಯುವತಿಯರನ್ನು ರಕ್ಷಿಸಿದ್ದಾರೆ. ಬಂಧಿತರಿಂದ ಮೂರು ಮೊಬೈಲ್ ಫೋನ್, 3,500ರೂ.ನಗದು, ಸೇರಿದಂತೆ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ದೀಪಕ್ ಹಾಸನದಲ್ಲಿ ಈ ಮೊದಲು ವೇಶ್ಯಾವಾಟಿಕೆ ದಂದೆಯಲ್ಲಿ ತೊಡಗಿದ್ದ, ನಂತರ ಬೆಂಗಳೂರಿನ ಚಿಕ್ಕಸಂದ್ರದಲ್ಲಿ ಮನೆಯೊಂದನ್ನು ಬಾಡಿಗೆಗೆ ಪಡೆದು ಕೆಲಸದ ಆಮಿಷವೊಡ್ಡಿ ಹೊರರಾಜ್ಯಗಳಿಂದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ ಎಂಬುದು ದಾಳಿಯ ವೇಳೆ ತಿಳಿದು ಬಂದಿದೆ. ಮೈಸೂರು ತಾಲೂಕು ಇಲವಾಲದ ಯುವಕ ಕಾಶಿ ಕೂಡ ಅಕ್ರಮ ಚಟುವಟಿಕೆಯಲ್ಲಿ ತೊಡಗಿ ಸಿಕ್ಕಿಬಿದ್ದಿದ್ದು, ಐಷಾರಾಮಿ ಜೀವನ ನಡೆಸಲು ಈ ದಂದೆಯಲ್ಲಿ ತೊಡಗಿದ್ದನೆಂದು ತಿಳಿದು ಬಂದಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: