ಪ್ರಮುಖ ಸುದ್ದಿ

ಶ್ರೀಚಾಮುಂಡೇಶ್ವರಿ ದೇವಾಲಯದಲ್ಲಿ ವಾರ್ಷಿಕ ಪೂಜಾ ಮಹೋತ್ಸವ

ರಾಜ್ಯ(ಮಡಿಕೇರಿ) ಏ.3 :- ನಗರದ ಕಾನ್ವೆಂಟ್ ಜಂಕ್ಷನ್ ಬಳಿಯ ಶ್ರೀಚಾಮುಂಡೇಶ್ವರಿ ದೇವಾಲಯದ ವಾರ್ಷಿಕ ಪೂಜಾ ಮಹೋತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು.

ಮುಂಜಾನೆಯಿಂದಲೇ ಹೋಮಹವನಾದಿ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನಡೆದವು. ಅಭಿಷೇಕ, ಅಲಂಕಾರ ಪೂಜೆಗಳಿಗೆ ನೂರಾರು ಭಕ್ತರು ಸಾಕ್ಷಿಯಾದರು. ಮಧ್ಯಾಹ್ನ ಮಹಾಪೂಜೆ ಮತ್ತು ಮಹಾಮಂಗಳಾರತಿಯ ನಂತರ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: