ಮೈಸೂರು

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪಿ.ಎಚ್.ಡಿ ಕೋರ್ಸ್’ಗಳ ಪ್ರವೇಶ ಪ್ರಕ್ರಿಯೆ ಮುಂದೂಡಿಕೆ

ಮೈಸೂರು,ಏ.3:- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪಿ.ಎಚ್.ಡಿ ಕೋರ್ಸ್’ಗಳ ಪ್ರವೇಶ ಪ್ರಕ್ರಿಯೆಯನ್ನು ಮುಂದೂಡಲಾಗಿದೆ.

ರಾಜ್ಯ ಮುಕ್ತ ವಿವಿ 2019-20ನೇ ಸಾಲಿನಲ್ಲಿ ಪ್ರಾರಂಭಿಸಲು ಉದ್ದೇಶಿಸಿರುವ ವಿವಿಧ ವಿಷಯಗಳ ಪಿಎಚ್ ಡಿ ಕೋರ್ಸ್ ಅರ್ಜಿ ಆಹ್ವಾನಿಸಿತ್ತು. ಆ ದಿನಾಂಕವನ್ನು ವಿಸ್ತರಿಸಿ ಮುಕ್ತ ವಿವಿ ಕುಲಪತಿಗಳು ಆದೇಶ ಹೊರಡಿಸಿದ್ದಾರೆ.

ದಂಡ ಶುಲ್ಕವಿಲ್ಲದೇ ಅರ್ಜಿ ಸಲ್ಲಿಸಲು ಮೇ 31 ಕೊನೆ ದಿನಾಂಕವಾಗಿದೆ. 500 ರೂ. ದಂಡ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಲು ಜೂನ್ 15 ಕೊನೆ ದಿನವಾಗಿದೆ ಎಂದು ಮುಕ್ತ ವಿವಿ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: