ದೇಶಪ್ರಮುಖ ಸುದ್ದಿ

ಎರಡು ದಿನಗಳಲ್ಲಿ ಜೆಡಿಎಸ್ ಚುನಾವನಾ ಪ್ರಣಾಳಿಕೆ ಬಿಡುಗಡೆ: ಹೆಚ್.ಡಿ.ದೇವೇಗೌಡ

ಬೆಂಗಳೂರು (ಏ.5): ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇನ್ನೆರಡು ದಿನಗಳಲ್ಲಿ ಜೆಡಿಎಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದೇವೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ. ಪದ್ಮನಾಭನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಇನ್ನೆರಡು ದಿನಗಳಲ್ಲಿ ಚುನಾವಣೆ ಪ್ರಣಾಳಿಕೆ ಬಿಡುಗಡೆ ಮಾಡುತ್ತೇವೆ ಎಂದರು.

ಕಾಂಗ್ರೆಸ್ ಪ್ರಣಾಳಿಕೆ ದೇಶ ವಿರೋಧಿ ಪ್ರಣಾಳಿಕೆ ಅನ್ನೋ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಮೋದಿ ಒಬ್ಬರೇ ದೇಶದ ರಕ್ಷಣೆ ಮಾಡುವುದಿಲ್ಲ. ಎಲ್ಲರೂ ದೇಶದ ರಕ್ಷಣೆ ಮಾಡುತ್ತಾರೆ ಎಂದು ಮೋದಿ ಹಾಗೂ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. (ಎನ್.ಬಿ)

Leave a Reply

comments

Related Articles

error: