ಮೈಸೂರು

ಹೆಣ್ಣು ಜಿಂಕೆ ಮೇಲೆ ನಾಯಿ ದಾಳಿ: ವೈದ್ಯರಿಂದ ಚಿಕಿತ್ಸೆ

ಆಹಾರ ಅರಸಿ ಬಂದ ಜಿಂಕೆ ಮೇಲೆ ನಾಯಿ ದಾಳಿ ಮಾಡಿದ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ಟೈಗರ್ ಬ್ಲಾಕ್ ಬಳಿ ನಡೆದಿದೆ.

ಕಾಡಿನಿಂದ ನಾಡಿಗೆ ಬಂದಿದ್ದ ಎರಡು ವರ್ಷದ ಹೆಣ್ಣು ಜಿಂಕೆಯ ಮೇಲೆ ದಾಳಿ ಮಾಡಿದ ನಾಯಿಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಜಿಂಕೆ ನಾಲೆಗೆ ಬಿದ್ದು ಗಾಯಗೊಂಡಿದೆ. ಎಚ್.ಡಿ.ಕೋಟೆ ಪಶುವೈದ್ಯಕೀಯ ಆಸ್ಪತ್ರೆಯಲ್ಲಿ ಜಿಂಕೆಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅರಣ್ಯ ಇಲಾಖೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

ಚೇತರಿಕೆ ಬಳಿಕ ಜಿಂಕೆಯನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನಕ್ಕೆ ಬಿಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

comments

Related Articles

error: