ಕರ್ನಾಟಕಪ್ರಮುಖ ಸುದ್ದಿ

ಕಾಂಗ್ರೆಸ್ ನಾಯಕರ ಹೆಗಲಿಗೆ ಜೆಡಿಎಸ್ ಅಭ್ಯರ್ಥಿಗಳ ಗೆಲುವಿನ ಹೊಣೆ!

ಬೆಂಗಳೂರು (ಏ.8): ಜೆಡಿಎಸ್ ಅಭ್ಯರ್ಥಿಗಳು ಇರುವ ಕ್ಷೇತ್ರಗಳಲ್ಲಿ ಆ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಬೇಕಾದ ಜವಾಬ್ದಾರಿಯನ್ನು ಕಾಂಗ್ರೆಸ್ ಪಕ್ಷದ ನಾಯಕರಿಗೆ ಪಕ್ಷದ ವರಿಷ್ಠರು ನೀಡಿದ್ದಾರೆ.

ಹೌದು! ರಾಜ್ಯದಲ್ಲಿ ದೋಸ್ತಿ ಸರ್ಕಾರ ನಡೆಸುತ್ತಿರುವ ಕಾಂಗ್ರೆಸ್ ಮತ್ತು ಜೆಡಿಎಸ್, ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು ಸೀಟು ಹಂಚಿಕೆ ಮಾಡಿಕೊಂಡಿವೆ. ಈ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ವೈಯಕ್ತಿಕ ಪ್ರತಿಷ್ಠೆಯನ್ನು ಬದಿಗಿಟ್ಟು, ಜೆಡಿಎಸ್ ಕ್ಷೇತ್ರಗಳಲ್ಲಿ ಬದ್ಧತೆಯಿಂದ ಕೆಲಸ ಮಾಡಬೇಕು. ಮೈತ್ರಿ ಧರ್ಮ ಪಾಲಿಸುವ ಜೊತೆಗೆ ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಬೇಕು. ರಾಜ್ಯದಲ್ಲಿ 20 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಜಯಗಳಿಸಲು ಹೆಚ್ಚಿನ ಶ್ರಮ ವಹಿಸಬೇಕು ಎಂದು ಪಕ್ಷದ ನಾಯಕರಿಗೆ ತಾಕೀತು ಮಾಡಿದ್ದಾರೆ.

ಮಂಡ್ಯ, ಹಾಸನ, ತುಮಕೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ನವರು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂಬ ದೂರುಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಗೊಂದಲವನ್ನು ಸರಿಪಡಿಸಿಕೊಂಡು ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗೆ ಹೆಚ್ಚಿನ ಶ್ರಮ ಹಾಕಬೇಕೆಂದು ರಾಜ್ಯ ಕಾಂಗ್ರೆಸ್ ನಾಯಕರಿಗೆ ಕೆ.ಸಿ. ವೇಣುಗೋಪಾಲ್ ತಾಕೀತು ಮಾಡಿದ್ದಾರೆ.

ಯಾವುದೇ ಭಿನ್ನಾಭಿಪ್ರಾಯಗಳಿದ್ದರೂ ಬಹಿರಂಗ ಹೇಳಿಕೆ ನೀಡಬಾರದು. ಕಾರ್ಯಕರ್ತರಿಗೆ ಮೈತ್ರಿಯ ಬಗ್ಗೆ ಮನದಟ್ಟು ಮಾಡಿಕೊಡಬೇಕು. ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಸಮನ್ವಯತೆ ಮೂಡಿಸಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ನಾಯಕರಿಗೆ ವೇಣುಗೋಪಾಲ್ ಸೂಚನೆ ನೀಡಿದ್ದಾರೆ. (ಎನ್.ಬಿ)

Leave a Reply

comments

Related Articles

error: