ಸುದ್ದಿ ಸಂಕ್ಷಿಪ್ತ

ಏಪ್ರಿಲ್ 10 ರಂದು ಸ್ವೀಪ್ ಸಾಹಸೋತ್ಸವ

ಮಂಡ್ಯ (ಏ.8): ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಡ್ಯ ಯುವ ಸ್ಪಂದನ ಇವರ ವತಿಯಿಂದ ಸ್ವೀಪ್ ಸಾಹಸೋತ್ಸವ ಕಾರ್ಯಕ್ರಮವನ್ನು ಏಪ್ರಿಲ್ 10 ರಂದು ಬೆಳಿಗ್ಗೆ 7.30 ರಿಂದ ಸಂಜೆ 4 ಗಂಟೆ ವರೆಗೆ ಸರ್.ಎಂ.ವಿ.ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಸಾಹಸೋತ್ಸವದಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೂ ಅಭಿನಂದನಾ ಪತ್ರವನ್ನು ನೀಡಲಾಗುವುದು. ಭಾಗವಹಿಸಿದ 10 ಮತದಾರರಿಗೆ ಲಕ್ಕಿ ಡಿಪ್ ಮುಖಾಂತರ ಆಯ್ಕೆ ಮಾಡಿ ವಿಶೇಷ ಬಹುಮಾನ ನೀಡಲಾಗುವುದು. ಹೆಚ್ಚಿನ ವಿವರಗಳಿಗಾಗಿ: 08232-230234, 08232-224725 ಸಂಪರ್ಕಿಸುವಂತೆ ಮಂಡ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ನಂದೀಶ್ ಅವರು ತಿಳಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: