ಕರ್ನಾಟಕ

ವಿಶೇಷಚೇತನರ ಮತದಾನಕ್ಕೆ ಮೂಲಸೌಕರ್ಯ ಕಲ್ಪಿಸಿ: ಟಿ.ಕೆ ಅನಿಲ್ ಕುಮಾರ್

ಮಂಡ್ಯ (ಏ.9): ಮಂಡ್ಯ ಲೋಕಸಭಾ ಸಾರ್ವತ್ರಿಕ ಚುನಾವಣೆ-2019ರ ಸಂಬಂಧ ಸ್ಥಾಪಿಸಲಾಗುತ್ತಿರುವ ಎಲ್ಲಾ ಮತಗಟ್ಟೆಗಳಲ್ಲಿ ವಿಶೇಷಚೇತನರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಮೂಲಸೌಕರ್ಯವನ್ನು ಸಮರ್ಪಕವಾಗಿ ಒದಗಿಸಲು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಆಕ್ಸೆಸಿಬಿಲಿಟಿ ವೀಕ್ಷಕರಾದ ಟಿ.ಕೆ ಅನಿಲ್ ಕುಮಾರ್ ಅವರು ಸೂಚನೆ ನೀಡಿದರು.

ಅವರು ಸೋಮವಾರ, ನಗರದ ಜಿಲ್ಲಾ ಪಂಚಾಯತ್ ಸಭಾಂಗಂಣದಲ್ಲಿ ವಿಶೇಷ ಚೇತನರಿಗೆ ಮತಗಟ್ಟೆಗಳಲ್ಲಿ ಕಲ್ಪಿಸಲಾಗುತ್ತಿರುವ ಸೌಕರ್ಯಗಳು ಹಾಗೂ ಮತದಾನ ಸಿದ್ದತೆ ಸಂಬಂಧ ಸಭೆ ನಡೆಸಿ ಅವರು ಮಾತನಾಡಿದರು.

ಮತಗಟ್ಟೆಗಳಲ್ಲಿ ರ್ಯಾಂಪ್, ವಿದ್ಯುತ್ ಸಂಪರ್ಕ, ನೀರು, ಶೌಚಾಲಯ ಸೇರಿದಂತೆ ಎಲ್ಲಾ ಸೌಲಭ್ಯಗಳು ಸರಿ ಇದೆಯೇ ಎಂಬ ಬಗ್ಗೆ ಪರಿಶೀಲಿಸಬೇಕು. ದುರಸ್ತಿ ಇದ್ದಲ್ಲಿ ತಕ್ಷಣವೇ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿದರು.

ಪ್ರತಿ ಮತಗಟ್ಟೆಗಳಿಗೆ ವೀಲ್ ಚೇರ್ ಸೌಲಭ್ಯ ನೀಡಬೇಕು. ಲಭ್ಯವಿರುವ ವಿ.ಆರ್.ಡ.ಬ್ಲ್ಯೂ, ಎಂ.ಆರ್.ಡ.ಬ್ಲ್ಯೂ ಹಾಗೂ ಮತಗಟ್ಟೆ ಮಟ್ಟದ ಅಧಿಕಾರಿಗಳ ಸಹಕಾರ ಪಡೆಯಬೇಕು. ಚುನಾವಣಾ ಆಪ್ ಹಾಗೂ 1950 ಟೋಲ್ ಫ್ರೀ ಸಂಖ್ಯೆಗೆ ಬರುವ ವಿಕಲಚೇತನರ ಸೌಲಭ್ಯ, ಬೇಡಿಕೆಗಳನ್ನು ಪರಿಶೀಲಿಸಿ ಅಗತ್ಯ ಮಾಹಿತಿ ಹಾಗೂ ಲಭ್ಯವಿರುವ ಸೌಲಭ್ಯಗಳ ಬಗ್ಗೆ ತಿಳಿವಳಿಕೆ ನೀಡುವಂತೆ ಸೂಚಿಸಿದರು.

ಎಲ್ಲಾ ಮತಗಟ್ಟೆಗಳಲ್ಲಿ ವಿಲಚೇತನರಿಗೆ ಮತ್ತು ವಯೋವೃದ್ಧರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ವೀಲ್ ಚೇರ್, ರ್ಯಾಂಪ್ ವ್ಯವಸ್ಥೆ ಮಾಡಬೇಕು. ಎಲ್ಲಾ 1794 ಮತಗಟ್ಟೆಗಳಲ್ಲಿ ಗಾಲಿ ಖುರ್ಚಿ ವ್ಯವಸ್ಥೆ ಮಾಡಬೇಕು. ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಈ ಎಲ್ಲಾ ವ್ಯವಸ್ಥೆ ಇರಬೇಕು. ಮತಗಟ್ಟೆಗೆ ನಡೆದುಕೊಂಡು ಹೋಗಲು ಸಾಧ್ಯವಾಗದ ವಿಕಲಚೇತನರಿಗೆ, ವಯೋವೃದ್ಧರಿಗೆ ವಾಹನಗಳ ವ್ಯವಸ್ಥೆಯನ್ನು ಕಲ್ಪಿಸಲು ಕ್ರಮ ವಹಿಸುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಅವಿನಾಶ್ ಮೆನೆನ್ ರಾಜೇಂದ್ರನ್, ಅಪರ ಜಿಲ್ಲಾಧಿಕಾರಿ ಸದಾಶಿವನಂದ ಪ್ರಭು ಹಾಗೂ ಇತರೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು. (ಎನ್.ಬಿ)

Leave a Reply

comments

Related Articles

error: