ಮೈಸೂರು

ರಮ್ಮನಹಳ್ಳಿಯಲ್ಲಿ ಮನೆ ಮನೆಗೆ ಸ್ಟಿಕ್ಕರ್ ಅಂಟಿಸಿ ಮತದಾನ ಜಾಗೃತಿ

ಮೈಸೂರು,ಏ.10:-  ಮೈಸೂರು ತಾಲೂಕು ಸ್ವೀಪ್ ಸಮಿತಿ ವತಿಯಿಂದ ರಮ್ಮನಹಳ್ಳಿ ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಮತದಾನ ಜಾಗೃತಿಯ ಸ್ಟಿಕ್ಕರ್ ಅಂಟಿಸಿ ಮತ್ತು ನೈತಿಕ ಮತದಾನದ ಕರ ಪತ್ರಳನ್ನು ಮತದಾರರಿಗೆ ನೀಡಿ ಮತದಾನ ಅರಿವು ಮೂಡಿಸಲಾಯಿತು ಎಂದು  ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಕೃಷ್ಣ ಅವರು ತಿಳಿಸಿದರು.

ನಿನ್ನೆ ರಮ್ಮನಹಳ್ಳಿ ಗ್ರಾಮದ ಶಾಲಾ ಮಕ್ಕಳು, ಅಂಗವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ನಾಗನಹಳ್ಳಿ ಬೀದಿಗಳಲ್ಲಿ ಜಾಥಾ ನಡೆಸಿ ಕಡ್ಡಾಯ ಮತದಾನದ ಪೋಸ್ಟರ್ ಹಿಡಿದು ಮತ್ತು ನೈತಿಕ ಚುನಾವಣೆಯ ಘೋಷವಾಕ್ಯಗಳನ್ನು ಕೂಗಿ ಜನತೆಗೆ ತಪ್ಪದೇ ಮತ ಚಲಾಯಿಸುವಂತೆ ಅರಿವು ಮೂಡಿಸಲಾಯಿತು.

ಮೈಸೂರು ತಾಲೂಕಿನಲ್ಲಿ ಹೆಚ್ಚು ಮತಗಳನ್ನು ಹೊಂದಿರುವ ಗ್ರಾಮಗಳ್ಳಿ ರಮ್ಮನಹಳ್ಳಿಯು ಕೂಡ ಒಂದಾಗಿದ್ದು ಗ್ರಾಮದ ನಾಗರೀಕ ಮತದಾರರಿಗೆ ಚುನಾವಣಾ ಪ್ರತಿಜ್ಞಾ ವಿಧಿಯನ್ನು ಅವರು ಬೋಧಿಸಿ ಮತದಾನದ ಬಗ್ಗೆ ಅರಿವು ಮೂಡಿಸಿದರು.

ಚುನಾವಣೆಯನ್ನು ನಾವು ದೇಶದ ಹಬ್ಬದ ರೀತಿಯಲ್ಲಿ ಆಚರಿಸಬೇಕು. ನಮ್ಮನ್ನಾಳುವ ನಾಯಕನನ್ನು ನಾವೇ ಹಾರಿಸಿವುದರಿಂದ ಸೂಕ್ತ ನಾಯಕತ್ವ ಗುಣವುಳ್ಳ ಸಮಾಜಿಕ ಚಿಂತನೆ ಇರುವವರನ್ನು ಆಯ್ಕೆ ಮಾಡಲು ನಿಮ್ಮ ಮತ ಅಮೂಲ್ಯ ಆದ್ದರಿಂದ 2019ರ ಏಪ್ರಿಲ್ 18 ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಮತದಾರರು ಯಾವುದೇ ಆಮಿಷಗಳಿಗೆ ಒಳಗಾದೆ ಕಡ್ಡಾಯವಾಗಿ ಮತದಾನ ಮಾಡುವಂತೆ ಮನವಿ ಮಾಡಿದರು.

ನೈತಿಕ ಚುನಾವಣೆಗೆ ಬೆಂಬಲ ನೀಡಿ ಪ್ರಜಾ ಪ್ರಭುತ್ವವನ್ನು ಬಲಪಡಿಸುವ ನಿಟ್ಟಿನಲ್ಲಿ ಸಾಗುವುದು ಅನಿವಾರ್ಯವಾಗಿದೆ ಯಾವುದೇ ಕಾರಣಕ್ಕೂ ಮತದಾನದಂತಹ ಪವಿತ್ರ ಕಾರ್ಯದಿಂದ ಹೊರಗುಳಿಯ ಬಾರದು ಎಂದು ಅವರು ತಿಳಿಸಿದರು.

ಶಿಶು ಅಭಿವೃದ್ಧಿ ಅಧಿಕಾರಿ ಮಂಜುಳಾ ಪಾಟೀಲ್, ರಮ್ಮನಹಳ್ಳಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಈಶುಕುಮಾರ್ ಮತ್ತು ಇನ್ನಿತರ ಅಧಿಕಾರಿಗಳು ಹಾಗೂ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: