
ಮೈಸೂರು
ಚುನಾವಣೆಯಂದು ಕರ್ತವ್ಯಕ್ಕೆ ನಿಯೋಜನೆಗೊಂಡ ಸಿಬ್ಬಂದಿಗಳಿಂದ ಬ್ಯಾಲೆಟ್ ವೋಟಿಂಗ್
ಮೈಸೂರು,ಏ.10:- ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ನಡೆಯುವ ಚುನಾವಣೆ ಏ.18ರಂದು ನಡೆಯಲಿದ್ದು, ಅಂದು ಚುನಾವಣಾ ಕರ್ತವ್ಯಕ್ಕೆ ಹಾಜರಾಗುವ ಚುನಾವಣಾ ಸಿಬ್ಬಂದಿಗಳು ಇಂದು ತಮ್ಮ ಹಕ್ಕನ್ನು ಚಲಾಯಿಸಿದರು.
ಏ.18ರಂದು ನಡೆಯುವ ಲೋಕಸಭಾ ಚುನಾವಣೆಗೆ ಸಾಕಷ್ಟು ಮಂದಿ ಸರ್ಕಾರಿ ನೌಕರರನ್ನು ಚುನಾವಣಾ ಸಿಬ್ಬಂದಿಗಳನ್ನಾಗಿ ಹಾಗೂ ಪೊಲೀಸರನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ.ಅದಕ್ಕಾಗಿ ಇಂದು ಚುನಾವಣಾ ಕರ್ತವ್ಯಕ್ಕೆ ನೇಮಕಗೊಂಡ ಹೋಂ ಗಾರ್ಡ್ಸ್ ಗಳು, ಪೊಲೀಸರು, ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳು, ಇತರ ಸರ್ಕಾರಿ ನೌಕರರು ಸಿಎಆರ್ ಮೈದಾನಲ್ಲಿಂದು ತಮ್ಮ ಮತವನ್ನು ಬ್ಯಾಲೆಟ್ ಪೇಪರ್ ನಲ್ಲಿ ಹಾಕಿ ಅದನ್ನು ಲಕೋಟೆಯಲ್ಲಿಟ್ಟು ಪೆಟ್ಟಿಗೆಗೆ ಹಾಕುವ ಮೂಲಕ ತಮ್ಮ ಹಕ್ಕು ಚಲಾಯಿಸಿದ್ದಾರೆ.
ಈ ಸಂದರ್ಭ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಸ್ಥಳಕ್ಕೆ ಭೇಟಿ ನೀಡಬಹುದಾದ್ದರಿಂದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಸ್ಥಳದಲ್ಲಿ ಕಾಣಿಸಿಕೊಂಡರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸರ್ಕಾರಿ ನೌಕರರು ಶ್ರಮದಿಂದಲೇ ಕರ್ತವ್ಯ ನಿರ್ವಹಿಸುತ್ತಾರೆ. ನಾನವರಿಗೆ ಬೆನ್ನೆಲುಬಾಗಿ ನಿಂತಿದ್ದೇನೆ. ಯಾರಿಗೆ ತಮ್ಮ ಹಕ್ಕನ್ನು ಚಲಾಯಿಸಿದರೆ ಅಭಿವೃದ್ಧಿ ಕಾಣಬಹುದೆಂಬ ಅರಿವಿದೆ. ಸೂಕ್ತ ವ್ಯಕ್ತಿಯನ್ನೇ ಆಯ್ಕೆ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. (ಕೆ.ಎಸ್,ಎಸ್.ಎಚ್)