ಮೈಸೂರು

ಪೌರಕಾರ್ಮಿಕರಿಗೆ ಉತ್ತಮ ಸೌಲಭ್ಯ ಸಿಗುತ್ತಿಲ್ಲ : ಪಿ.ವಾಸು ಬೇಸರ

ನಗರವನ್ನು ಸ್ವಚ್ಛಗೊಳಿಸುವ ಕಾಯಕದಲ್ಲಿ ತೊಡಗಿಸಿಕೊಳ್ಳುವ ಪೌರಕಾರ್ಮಿಕರಿಗೆ ಉತ್ತಮ ಸೌಲಭ್ಯಗಳು ಸಿಗುತ್ತಿಲ್ಲ ಎಂದು ಶಾಸಕ ಪಿ.ವಾಸು ಬೇಸರ ವ್ಯಕ್ತಪಡಿಸಿದರು.

ಮೈಸೂರು ಮಹಾನಗರಪಾಲಿಕೆ ಮತ್ತು ರಾಮಕೃಷ್ಣ ಆಶ್ರಮ ವತಿಯಿಂದ 40ವಾರಗಳ ಕಾಲ  ಸ್ವಚ್ಛ ಮೈಸೂರು-ಸ್ವಚ್ಛ ಜೀವನ ಧ್ಯೇಯ ವಾಕ್ಯದಡಿ ನಡೆಯಲಿರುವ ಸ್ವಚ್ಛತಾ ಅಭಿಯಾನಕ್ಕೆ ಮಂಜುನಾಥಪುರದ ಸರ್ಕಾರಿ ಶಾಲೆಯಲ್ಲಿ ಪಿ.ವಾಸು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಪೌರಕಾರ್ಮಿಕರು ನಗರದ ಸ್ವಚ್ಛತೆಗಾಗಿ ದಿನವಿಡೀ ಶ್ರಮಿಸುತ್ತಾರೆ. ಆದರೆ ಅವರಿಗೆ ಸಿಗಬೇಕಾದ ಸೌಲಭ್ಯಗಳು ಸರಿಯಾಗಿ ಸಿಗುತ್ತಿಲ್ಲ. ಅತ್ತ ಗಮನ ಹರಿಸಬೇಕಿದೆ ಎಂದರು.

ಸ್ವಚ್ಛತೆ ಕುರಿತಂತೆ ನಗರದ ಬಹಳಷ್ಟು ಬಡಾವಣೆಗಳು ಉತ್ತಮ ಸೌಕರ್ಯಗಳನ್ನು ಹೊಂದಿಲ್ಲ. ಎಲ್ಲ ಬಡಾವಣೆಗಳ ಸ್ವಚ್ಛತೆ ಕುರಿತು ಗಮನ ನೀಡಬೇಕು ಎಂದು ತಿಳಿಸಿದರು.

ಈ ಸಂದರ್ಭ ರಾಮಕೃಷ್ಣ ಆಶ್ರಮದ ಅಧ್ಯಕ್ಷ ಆತ್ಮಾನಂದಜೀ ಸ್ವಾಮೀಜಿ, ವಿಧಾನಪರಿಷತ್ ಮಾಜಿ ಸದಸ್ಯ ಡಿ.ಮಾದೇಗೌಡ, ಪಾಲಿಕೆ ಆಯುಕ್ತ ಜೆ.ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: