
ಕರ್ನಾಟಕಪ್ರಮುಖ ಸುದ್ದಿ
ಕಾಂಗ್ರೆಸ್ನಿಂದ ಎಸ್ಎಂಕೆ ಎಲ್ಲ ಪಡೆದಿದ್ದಾರೆ: ಸಿದ್ದರಾಮಯ್ಯ
ಬೆಂಗಳೂರು: ಕಾಂಗ್ರೆಸ್ ತೊರೆದಿರುವ ಎಸ್ಎಂ ಕೃಷ್ಣ ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳಲು ಪ್ರಯತ್ನಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಎಸ್.ಎಂ.ಕೆ ಅವರಂಥ ಹಿರಿಯ ಮಾರ್ಗದರ್ಶನ ಪಕ್ಷಕ್ಕೆ ಅಗತ್ಯವಿದೆ. ಅವರು ಪಕ್ಷದಲ್ಲೇ ಉಳಿದುಕೊಳ್ಳಬೇಕು ಎನ್ನುವುದು ನನ್ನ ಬಯಕೆಯೂ ಹೌದು. ಈ ನಿಟ್ಟಿನಲ್ಲಿ ರಾಜ್ಯ ಸಚಿವ ಸಂಪುದ ಸದಸ್ಯರು ಅವರನ್ನು ಭೇಟಿ ಮಾಡಿ ಮನವೊಲಿಸುವ ಪ್ರಯತ್ನ ಮಾಡಲಿದ್ದಾರೆ ಎಂದರು.
ಪಕ್ಷದಿಂದ ಎಲ್ಲ ಪಡೆದಿದ್ದಾರೆ:
ಕಾಂಗ್ರೆಸ್ ಪಕ್ಷದಿಂದ ಸಿಎಂ ಸಿದ್ದರಾಮಯ್ಯ ಅವರು ಎಲ್ಲವನ್ನೂ ಪಡೆದಿದ್ದಾರೆ. ರಾಜ್ಯದಲ್ಲಿ ಸಚಿವ, ಸ್ಪೀಕರ್, ಮುಖ್ಯಮಂತ್ರಿ, ರಾಜ್ಯಪಾಲ, ಕೇಂದ್ರದಲ್ಲಿ ವಿದೇಶಾಂಗ ಸಚಿವ, ವಿದೇಶಾಂಗ ಸಚಿವರಾಗಿ ಅಧಿಕಾರದಲ್ಲಿದ್ದ ಅವರಿಗೆ ಪಕ್ಷ ಬಿಡುವ ಮನಸು ಯಾಕೆ ಬಂತು ಎಂದು ತಿಳಿಯುತ್ತಿಲ್ಲ. ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆದಿವೆ ಎಂದು ಪುನರುಚ್ಚರಿಸಿದರು.