
ಕರ್ನಾಟಕ
ಸಿದ್ದರಾಮಯ್ಯ, ಜಿ.ಟಿ.ಡಿ ಪುತ್ರರಿಂದ ಮೈತ್ರಿ ಅಭ್ಯರ್ಥಿ ಪರ ಜಂಟಿ ಪ್ರಚಾರ!
ಚಾಮರಾಜನಗರ (ಏ.11): ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರ ಹಾಗೂ ಸಚಿವ ಜಿ.ಟಿ.ದೇವೇಗೌಡರ ಪುತ್ರ ಹರೀಶ್ ಗೌಡ ಮೈತ್ರಿ ಅಭ್ಯರ್ಥಿ ಅಭ್ಯರ್ಥಿ ವಿಜಯಶಂಕರ್ ಪರ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.
ಮೈಸೂರಿನ ಜನತಾ ನಗರದ ಮಹದೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಪ್ರಚಾರಕ್ಕೆ ಚಾಲನೆ ನೀಡಲಾಯಿತು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರ ಜಿದ್ದಾಜಿದ್ದಿನ ಕಣವಾಗಿತ್ತು. ಹೀಗಾಗಿ ಕಳೆದ ಚುನಾವಣೆಯ ಮುನಿಸು ಮರೆದು ಮೈತ್ರಿ ಅಭ್ಯರ್ಥಿ ಪರ ಜಂಟಿ ಪ್ರಚಾರ ಮಾಡುತ್ತಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿಯಾಗಿದೆ. ಹೀಗಾಗಿ ನಾವು ನಮ್ಮ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿದ್ದೇವೆ. ನಮ್ಮ ತಂದೆ ಜಿ.ಟಿ. ದೇವೇಗೌಡರ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ ನಡೆಸಿದ್ದೇವೆ. ಎಲ್ಲರು ಮೈತ್ರಿ ಅಭ್ಯರ್ಥಿ ಪರ ಪ್ರಮಾಣಿಕವಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಹರೀಶ್ ಗೌಡ ಹೇಳಿದ್ದಾರೆ. (ಎನ್.ಬಿ)