Uncategorized

ಇಂದು ರಾಯ್ ಬರೇಲಿಯಲ್ಲಿ ಸೋನಿಯಾ ಗಾಂಧಿ ನಾಮಪತ್ರ ಸಲ್ಲಿಕೆ

ಲಕ್ನೋ,.11- ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

19 ವರ್ಷಗಳ ಕಾಲ ಕಾಂಗ್ರೆಸ್ ಸೋನಿಯಾ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. 2017ರಲ್ಲಿ ಅವರು ಪಕ್ಷದ ಜವಾಬ್ದಾರಿಯನ್ನು ಪುತ್ರ ರಾಹುಲ್ ಗಾಂಧಿಗೆ ವಹಿಸಿಕೊಟ್ಟರು. ಸದ್ಯ ಯುಪಿಎ ಚೇರ್ಮನ್ ಆಗಿ ಸೋನಿಯಾ ಗಾಂಧಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮೈತ್ರಿ ಪಕ್ಷಗಳ ಜತೆ ಸಂಪರ್ಕ ಸಂಪನ್ಮೂಲ ವ್ಯಕ್ತಿಯಾಗಿ ಸೋನಿಯಾ ಇದ್ದಾರೆ.

ಸೋನಿಯಾ ಅವರು ನಾಮಪತ್ರ ಸಲ್ಲಿಕೆಗೂ ಮುನ್ನ ರಾಯ್ ಬರೇಲಿಯಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಎಲ್ಕೆಪಿ ಸಿಂಗ್ ತಿಳಿಸಿದ್ದಾರೆ.

ಪಕ್ಷದ ಕೇಂದ್ರ ಕಚೇರಿಯಲ್ಲಿ ಹವನವನ್ನೂ ನಡೆಸಲಿದ್ದಾರೆ. ಸೋನಿಯಾ ಅವರ ವಿರುದ್ಧ ಬಿಜೆಪಿಯ ದಿನೇಶ್ ಪ್ರತಾಪ್ ಸಿಂಗ್ ಅವರು ಕಣದಲ್ಲಿದ್ದಾರೆ. ಒಂದು ವಾರದ ಹಿಂದಷ್ಟೇ ದಿನೇಶ್ ಪ್ರತಾಪ್ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಸೋನಿಯಾ ಗಾಂಧಿ 2014ರಲ್ಲಿ 5,26,434 ಮತಗಳನ್ನು ಗಳಿಸಿದ್ದರು. (ಎಂ.ಎನ್)

Leave a Reply

comments

Related Articles

error: