ಕರ್ನಾಟಕಪ್ರಮುಖ ಸುದ್ದಿ

ಬೆಂಗಳೂರಿನ 3 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿಗೆ ಗೆಲುವು: ಎಸ್.ಎಂ.ಕೃಷ್ಣ ವಿಶ್ವಾಸ

ಬೆಂಗಳೂರು (ಏ.12): ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಜಯಗಳಿಸುತ್ತದೆ ಎಂದು ಮಾಜಿ ಸಿ.ಎಂ ಬಿಜೆಪಿ ಹಿರಿಯ ಮುಖಂಡ ಎಸ್.ಎಂ ಕೃಷ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಪರ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಎಸ್.ಎಂ.ಕೃಷ್ಣ, ತೇಜಸ್ವಿ ಸೂರ್ಯ ಹಿರಿಯ ನಾಯಕರನ್ನು ಒಗ್ಗೂಡಿಸಿಕೊಂಡು ಚುನಾವಣೆ ನಡೆಸುತ್ತಿದ್ದಾರೆ. ಕ್ಷೇತ್ರದಲ್ಲಿ ಈಗಾಗಲೇ ಗೆಲುವಿನ ವಾತಾವರಣ ಸೃಷ್ಟಿಯಾಗಿದೆ. ಮತದಾರರು ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಉಳಿಸಬೇಕು ಎಂದು ಕಿವಿ ಮಾತು ಹೇಳಿದರು.

ಹೆಚ್ಚು ಹೆಚ್ಚು ಮತದಾರರು ಮತಗಟ್ಟೆಗೆ ಹೋದರೆ ಪ್ರತಿಶಿಷ್ಟ ಪಕ್ಷವಾಗಿರುವ ಬಿಜೆಪಿ ಹೆಚ್ಚು ಅನುಕೂಲವಾಗಲಿದೆ ಎಂದರು. ಎರಡು ಹಂತದ ಚುನಾವಣೆಗಳಲ್ಲಿ ಮತದಾರರು ಹೆಚ್ಚಾಗಿ ಮತ ಚಲಾಯಿಸಬೇಕು, ವಿಶೇಷವಾಗಿ ಬೆಂಗಳೂರಿಗರಲ್ಲಿ ಮತ ಚಲಾವಣೆ ಮಾಡುವಂತೆ ಮನವಿ ಮಾಡಿ ಆ ಮೂಲಕ ಪ್ರಜಾಪ್ರಭುತ್ವವನ್ನು ಉಳಿಸುವಂತೆ ಕರೆ ನೀಡಿದರು.

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಆರಂಭವಾದ ವಿಜಯ ಸಂಕಲ್ಪ ಯಾತ್ರೆಯು‌ ಗೋವಿಂದರಾಜನಗರ, ಪ್ರಶಾಂತ ನಗರ, ಮೂಡಲಪಾಳ್ಯ, ನಾಗರಬಾವಿ ಮುಖ್ಯ ರಸ್ತೆ ಮಾರ್ಗವಾಗಿ ಅನುಭವನಗರ, ಮಾರುತಿ ನಗರದವರೆಗೂ ಸಂಚರಿಸಿತು. ಯಾತ್ರೆಯಲ್ಲಿ ತೇಜಸ್ವಿ ಸೂರ್ಯ, ಶಾಸಕರಾದ ಆರ್.ಅಶೋಕ್, ವಿ.ಸೋಮಣ್ಣ, ಆರ್.ದೇವೆಗೌಡ, ಉಮೇಶ್ ಶೆಟ್ಟಿ, ಅರುಣ್ ಸೋಮಣ್ಣ, ಮಾಜಿ ಮೇಯರ್ ಶಾಂತಕುಮಾರಿ, ಬುಲೆಟ್ ಪ್ರಕಾಶ್, ಬಿಬಿಎಂಪಿ ಬಿಜೆಪಿ ಸದಸ್ಯರು ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು, ಕಾರ್ಯಕರ್ತರು ಸಾಥ್ ನೀಡಿದರು. (ಎನ್.ಬಿ)

Leave a Reply

comments

Related Articles

error: