ಮೈಸೂರು

ಚುನಾವಣಾ ಸಿಬ್ಬಂದಿಗಳಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಸೌಲಭ್ಯ

ಮೈಸೂರು ಏ.13:-  ಲೋಕಸಭಾ ಸಾರ್ವತ್ರಿಕ ಚುನಾವಣೆ-2019ರ ಸಂಬಂಧ ಚುನಾವಣಾ ಕಾರ್ಯಕ್ಕೆ ನೇಮಕಗೊಂಡಿರುವ ಮತಗಟ್ಟೆ ಸಿಬ್ಬಂದಿಗಳಿಗೆ ಅವರು ಕರ್ತವ್ಯ ನಿರ್ವಹಿಸಿರುತ್ತಿರುವ ವಿಧಾನಸಭಾ ಕ್ಷೇತ್ರದಿಂದ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ವಿಧಾನಸಭಾ ಕ್ಷೇತ್ರಕ್ಕೆ ತೆರಳಲು   17-04-2019 ರಂದು ಬೆಳಿಗ್ಗೆ 6 ಗಂಟೆಗೆ ಕರ್ತವ್ಯ ನಿರ್ವಹಿಸುತ್ತಿರುವ ವಿಧಾನಸಭಾ ಕ್ಷೇತ್ರದ ಮಸ್ಟರಿಂಗ್ ಸ್ಥಳದಿಂದ ಕೆ.ಎಸ್.ಆರ್.ಟಿ.ಸಿ. ಬಸ್ ವ್ಯವಸ್ಥೆ ಮಾಡಲಾಗಿದೆ.

ಮಸ್ಟರಿಂಗ್ ನಡೆಯುವ ಸ್ಥಳದ ವಿವರ ಹೀಗಿದೆ. 210-ಪಿರಿಯಾಪಟ್ಟಣ-ಪಿರಿಯಾಪಟ್ಟಣ ತಾಲ್ಲೂಕಿನ ಗೋಣಿಕೊಪ್ಪ ರಸ್ತೆಯಲ್ಲಿರುವ ಪುಷ್ಪಾ ಕಾನ್ವೆಂಟ್, 211-ಕೃಷ್ಣರಾಜನಗರ-ಕೆ.ಆರ್. ನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು,

212-ಹುಣಸೂರು-ಹುಣಸೂರು ತಾಲೂಕಿನ ಶ್ರೀ.ಡಿ. ದೇವರಾಜ ಅರಸು ಪ್ರಥಮ ದರ್ಜೆ ಕಾಲೇಜು, 213-ಹೆಚ್.ಡಿ.ಕೋಟೆ-ಹೆಚ್.ಡಿ.ಕೋಟೆ ತಾಲೂಕಿನ ಸೆಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆ (ಕನ್ನಡ ಮಾಧ್ಯಮ).

214-ನಂಜನಗೂಡು-ನಂಜನಗೂಡು ತಾಲೂಕಿನ ಸರ್ಕಾರಿ ಬಾಲಕರ ಜೂನಿಯರ್ ಕಾಲೇಜು, 215- ಚಾಮುಂಡೇಶ್ವರಿ-ಜೆ.ಎಲ್. ರಸ್ತೆಯಲ್ಲಿರುವ ಮಹಾರಾಣಿ ಮಹಿಳಾ ಕಲಾ ಮತ್ತು ವಾಣಿಜ್ಯ ಕಾಲೇಜು, 216-ಕೃಷ್ಣರಾಜ-ಮೈಸೂರು ನಗರದ ಮಹಾರಾಜ ಕಾಲೇಜಿನ ಶತಮಾನೋತ್ಸವ ಭವನ, 217-ಚಾಮರಾಜ-ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಹತ್ತಿರವಿರುವ ಬೆಡನ್ ಪೊವೆಲ್ ಸ್ಕೂಲ್, 218-ನರಸಿಂಹರಾಜ ಮೈಸೂರು ನಗರದ ಊಟಿ ರಸ್ತೆಯಲ್ಲಿರುವ ಜೆ.ಎಸ್.ಎಸ್. ಕಲಾ ವಾಣಿಜ್ಯ ಮತ್ತು ವಿಜ್ಞಾನ ಕಾಲೇಜು, 219-ವರುಣ-ನಂಜನಗೂಡು ತಾಲ್ಲೂಕಿನ ದೇವೀರಮ್ಮನಹಳ್ಳಿಯ ಜೆ.ಎಸ್.ಎಸ್. ಪ್ರಥಮ ದರ್ಜೆ ಕಾಲೇಜು, 220-ಟಿ.ನರಸೀಪುರ- ವಿದ್ಯೋದಯ ಮಹಿಳಾ ಪಿ.ಯು. ಕಾಲೇಜಿನಲ್ಲಿ ನಡೆಯಲಿದೆ.

ಚುನಾವಣಾ ಕರ್ತವ್ಯಕ್ಕೆ ನೇಮಕಗೊಂಡಿರುವ ಸಿಬ್ಬಂದಿಗಳು ಮಸ್ಟರಿಂಗ್ ಸ್ಥಳದಲ್ಲಿ 17-04-2019 ಬೆಳಿಗ್ಗೆ 6 ಗಂಟೆಗೆ ಹಾಜರಾಗಿ ಕೆ.ಎಸ್.ಆರ್.ಟಿ.ಸಿ. ಬಸ್ ಸೌಲಭ್ಯವನ್ನು ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: