ಪ್ರಮುಖ ಸುದ್ದಿ

ಭಯೋತ್ಪಾದಕರು ಮತ್ತು ಭದ್ರತಾಪಡೆಗಳ ನಡುವೆ   ಗುಂಡಿನ ಚಕಮಕಿ : ಇಬ್ಬರು ಭಯೋತ್ಪಾದಕರ ಹತ್ಯೆ

ದೇಶ(ನವದೆಹಲಿ)ಏ.13:- ಜಮ್ಮು-ಕಾಶ್ಮೀರದ ಶೋಪಿಯಾನ್ ದಲ್ಲಿ  ಭಯೋತ್ಪಾದಕರು ಮತ್ತು ಭದ್ರತಾಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರನ್ನು ಭದ್ರತಾಪಡೆಯ ಸಿಬ್ಬಂದಿಗಳು ಹೊಡೆದುರುಳಿಸಿದ್ದಾರೆ.

ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಗಹಾಮಡ್ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಕುರಿತು ಖಚಿತ ಮಾಹಿತಿ ಪಡೆದ ಭದ್ರತಾಪಡೆಯ ಸಿಬ್ಬಂದಿಗಳು ಉಗ್ರರಿಗಾಗಿ ಹುಡುಕಾಟ ನಡೆಸಿತ್ತು.

ಭಾರತೀಯ ಯೋಧರು ಕಾಣಿಸುತ್ತಲೇ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಭದ್ರತಾಪಡೆಯ ಯೋಧರೂ ಕೂಡ ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ ಎನ್ನಲಾಗಿದೆ. (ಎಸ್.ಎಚ್)

 

Leave a Reply

comments

Related Articles

error: