ಸುದ್ದಿ ಸಂಕ್ಷಿಪ್ತ

ಫೆ.1: ಮಾಚಿದೇವರ ಜಯಂತ್ಯುತ್ಸವ

ಕರ್ನಾಟಕ ರಾಜ್ಯ ಮಡಿವಾಳರ ಸಂಘದ ಆಶ್ರಯದಲ್ಲಿ ಮೈಸೂರಿನಲ್ಲಿ ಫೆ.1 ರಂದು ವೀರಮಡಿವಾಳ ಮಾಚಿದೇವರ ಜಯಂತ್ಯುತ್ಸವ ಹಾಗೂ ಬೃಹತ್ ಜಾಗೃತಿ ಸಮಾವೇಶ  ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಅಧ್ಯಕ್ಷ ಎಸ್.ರವಿನಂದನ್ ತಿಳಿಸಿದರು.

ಮೈಸೂರಿನ ಖಾಸಗಿ ಹೋಟೆಲಿನಲ್ಲಿ ಕರ್ನಾಟಕ ರಾಜ್ಯ ಮಡಿವಾಳರ ಸಂಘದ ಆಶ್ರಯದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು  ಸಮಾವೇಶದಲ್ಲಿ  2ಲಕ್ಷ ಜನರು ಸೇರುವ ನಿರೀಕ್ಷೆಯಿದೆ ಎಂದರು. ಅಂದು ಜಯಂತ್ಯೋತ್ಸವ ಹಾಗೂ ಕೊಲಂಬಿಯಾ ಏಷಿಯಾ ಆಸ್ಪತ್ರೆಯಿಂದ ಜೆ.ಕೆ.ಮೈದಾನದವರೆಗೆ ಬೈಕ್ ರ್ಯಾಲಿ ಏರ್ಪಡಿಸಲಾಗಿದೆ. ಜೆ.ಕೆ.ಮೈದಾನದಲ್ಲಿರುವ ಎಂಎಂಸಿ ಅಮೃತಮಹೋತ್ಸವ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಶಿವಯೋಗಾನಂದಪುರಿ ಸ್ವಾಮೀಜಿ, ಬಸವಮಾಚಿದೇವ ಸ್ವಾಮೀಜಿ, ಮುಕ್ತಾನಂದ ಸ್ವಾಮೀಜಿ ಅವರು ಉಪಸ್ಥಿತರಿರುತ್ತಾರೆ. ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪ್ರಚಾರ ಸಮಿತಿ ಅಧ್ಯಕ್ಷ ಎ.ಎಸ್.ರವಿಕುಮಾರ್, ಮೈಸೂರು ಜಿಲ್ಲಾ ಅಧ್ಯಕ್ಷ ಚಂದ್ರಶೇಖರ ಬೈರಿ, ಸದಸ್ಯರಾದ ನಾಗೇಶ್, ಎಂ.ರಾಜು, ವಸಂತ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: