ಮೈಸೂರು

ಏ.18 : ಮೈಸೂರು ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆ : ಜಿಲ್ಲಾಡಳಿತ ಸಜ್ಜು ; 16ರ ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ : ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಮಾಹಿತಿ

ಮೈಸೂರು,ಏ.15:- ಗುರುವಾರ ಅಂದರೆ ಏ.18ರಂದು 21-ಮೈಸೂರು ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಮುಕ್ತ ಮತ್ತು ನ್ಯಾಯಸಮ್ಮತ ಮತದಾನಕ್ಕೆ ಜಿಲ್ಲಾಡಳಿತ ಸಜ್ಜುಗೊಂಡಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಮಾಹಿತಿ ನೀಡಿದರು.

ಈ ಕುರಿತು ತಮ್ಮ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಅವರು ಮಡಿಕೇರಿಯಲ್ಲಿ   221359, ವಿರಾಜಪೇಟೆಯಲ್ಲಿ 219682, ಪಿರಿಯಾಪಟ್ಟಣದಲ್ಲಿ 183717, ಹುಣಸೂರಿನಲ್ಲಿ 226960, ಚಾಮುಂಡೇಶ್ವರಿಯಲ್ಲಿ 302823, ಕೃಷ್ಣರಾಜದಲ್ಲಿ 243736, ಚಾಮರಾಜದಲ್ಲಿ 233331, ನರಸಿಂಹರಾಜದಲ್ಲಿ 263448 , ಒಟ್ಟು 1895056ಮತದಾರರಿದ್ದಾರೆ ಎಂದರು. 2187ಮತಗಟ್ಟೆಗಳಿಗೆ ಒಟ್ಟು 2406ಮತಗಟ್ಟೆ ಅಧ್ಯಕ್ಷಾಧಿಕಾರಿಗಳು, 2406 ಸಹಾಯಕ ಮತಗಟ್ಟೆ ಅಧ್ಯಕ್ಷಾಧಿಕಾರಿಗಳು, 4812 ಮತದಾನಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪ್ರತಿಮತಗಟ್ಟೆಗೆ ಒಬ್ಬರು ಮತಗಟ್ಟೆ ಅಧ್ಯಕ್ಷಾಧಿಕಾರಿ, ಒಬ್ಬರು ಸಹಾಯಕ ಅಧ್ಯಕ್ಷಾದಿಕಾರಿ ಮತ್ತು ಇಬ್ಬರು ಮತದಾನಾಧಿಕಾರಿಗಳನ್ನು ನೇಮಿಸಲಾಗಿದೆ. ಇದರೊಂದಿಗೆ ಸ್ಥಳೀಯವಾಗಿ ಒಬ್ಬರು ಗ್ರೂಪ್  ಡಿ ಮತ್ತು ಮತದಾರರನ್ನು ಗುರುತಿಸಲು ಪ್ರತಿಮತಗಟ್ಟೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ತಿಳಿಸಿದರು. ಮತದಾನಾಧಿಕಾರಿಗಳು ತಾವು ಕರ್ತವ್ಯ ನಿರ್ವಹಿಸುತ್ತಿರುವ ಕ್ಷೇತ್ರದಿಂದ ನಿಯೋಜಿಸಲ್ಪಟ್ಟಲ್ಲಿ ಆ ವಿಧಾನಸಭಾ ಕ್ಷೇತ್ರಗಳಿಗೆ ತಲುಪಲು ಸಾರಿಗೆ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. ಮಸ್ಟರಿಂಗ್ ಕೇಂದ್ರಗಳಿಗೆ 17-04-2019ರ ಬೆಳಿಗ್ಗೆ 6ಗಂಟೆಗೆ ಬಸ್ ಹೊರಡಲಿದೆ ಎಂದರು. ಬೆಳಿಗ್ಗೆ 7ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದೆ. ಅಧಿಕಾರಿಗಳನ್ನು ಮತಗಟ್ಟೆಗಳಿಗೆ ತಲುಪಿಸಲು ಒಟ್ಟು 405 ಕೆಎಸ್ ಆರ್ ಟಿಸಿ ಬಸ್, 114ಜೀಪ್, 95ಮಿನಿ ಬಸ್ ಗಳನ್ನು ಉಪಯೋಗಿಸಲಾಗುತ್ತಿದೆ. ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಮೈಸೂರು ಜಿಲ್ಲೆಯ 6ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿವಿಧಾನಸಭಾ ಕ್ಷೇತ್ರಕ್ಕೆ 2ರಂತೆ ಒಟ್ಟು 12 ಸಖಿ ಮತಗಟ್ಟೆಗಳನ್ನು ಮತ್ತು ಮಡಿಕೇರಿ ಜಿಲ್ಲೆಯ 2ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿವಿಧಾನಸಭಾ ಕ್ಷೇತ್ರಕ್ಕೆ 5ರಂತೆ 10ಸಖಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 11 ಬುಡಕಟ್ಟು ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಒಟ್ಟು 7ದಿವ್ಯಾಂಗ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇಲ್ಲಿಯವರೆಗೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕೆ 24ಪ್ರಕರಣಗಳಲ್ಲಿ ಎಫ್ ಐ ಆರ್ ದಾಖಲಾಗಿದೆ. ಒಟ್ಟು 43,97,120ನಗದು, 33,810,435ಲೀ ಅಕ್ರಮ ಮದ್ಯ ವಶಪಡಿಸಿಕೊಳ್ಳಲಾಗಿದೆ. ಚುನಾವಣಾ ಪ್ರಚಾರ ಸಾಮಗ್ರಿ ಇತರೇ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅದರ ಅಂದಾಜು ಬೆಲೆ 686300ರೂ.ಆಗಿದೆ ಎಂದರು. ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ 12 ಪ್ರಕರಣಗಳಿಗೆ  ಎಫ್ ಐ ಆರ್ ದಾಖಲಿಸಲಾಗಿದ್ದು, ಒಟ್ಟು 9.59,810 ನಗದು, ಅಂದಾಜು 83.35.631ರೂ ಬೆಲೆಯ 14438.47ಲೀ ಅಕ್ರಮ ಮದ್ಯ ವಶ ಪಡೆದುಕೊಳ್ಳಲಾಗಿದೆ. 26,15,000 ಅಂದಾಜು ರೂ. ನ ಚುನಾವಣಾ ಪ್ರಚಾರ ಸಾಮಗ್ರಿ ವಶಕ್ಕೆ ಪಡೆಯಲಾಗಿದೆ. 16ರ ಸಂಜೆ 6ಗಂಟೆಯೊಳಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ ಎಂದರು.

ಚುನಾವಣಾ ಭದ್ರತಾ ವ್ಯವಸ್ಥೆ ಕುರಿತು  ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ಮಾಹಿತಿ ನೀಡಿ ಮತದಾನ ದಿನ 20 ಇನ್ಸ ಪೆಕ್ಟರ್,59 ಸೆಕ್ಟರ್ ಮೊಬೈಲ್,6 ಎಸಿಪಿ,4 ಕೆ.ಎಸ್ ಆರ್, ಪಿ,ಅಶ್ವದಳ,ಸಿಆರ್ ಪಿಎಫ್ , ಸಿಎಆರ್  20 ತುಕಡಿ ಪೋಲಿಸ್ ಸಿಬ್ಬಂದಿ, ಹೋಮ್ ಗಾರ್ಡ್ಸ್ ನೇಮಕ ಮಾಡಲಾಗಿದೆ. ಒಟ್ಟು ನಗರ ಗ್ರಾಮಾಂತರ ಸೇರಿ 4562 ಪೋಲಿಸ್ ಸಿಬ್ಬಂದಿ ಹಾಗೂ ಹೋಂ ಗಾರ್ಡ್ ನೀಯೋಜನೆ ಮಾಡಲಾಗಿದೆ. ಮತಗಟ್ಟೆಗಳಲ್ಲಿ ಮೈಕ್ರೋ ಅಬ್ಸ್    ವರ್ ,ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದ್ದು, ಸಿಸಿ ಕ್ಯಾಮರ ಅಳವಡಿಸಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ   ಜಿ.ಪಂ ಸಿಇಓ ಕೆ.ಜ್ಯೋತಿ, ಅಪರ ಜಿಲ್ಲಾಧಿಕಾರಿ ಅನುರಾಧ, ಮನಪಾ ಆಯುಕ್ತೆ ಶಿಲ್ಪನಾಗ್, ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಿಂಗ್ ಮತ್ತಿತರರು ಇದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: