ಮೈಸೂರು

ನಾಳೆ ಮೈಸೂರಿಗೆ ಮುಖ್ಯಮಂತ್ರಿ

ಫೆ 1. ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿಗೆ ಆಗಮಿಸಲಿದ್ದಾರೆ. ಅಂದು ಬೆಳಿಗ್ಗೆ  11.30 ಕ್ಕೆ ಮೈಸೂರಿನ ಮಂಡಕಳ‍್ಳಿ ವಿಮಾನ ನಿಲ್ದಾಣ ತಲುಪಿ, ನಂತರ ಮಧ‍್ಯಾಹ್ನ 12.30 ಕ್ಕೆ ಕರ್ನಾಟಕ ರಾಜ್ಯ ಮಡಿವಾಳರ ಸಂಘದ ವತಿಯಿಂದ ಜೆ.ಕೆ.ಗ್ರೌಂಡ್ಸ್ ನಲ್ಲಿ ಆಯೋಜಿಸಿರುವ ಮಡಿವಾಳ ಮಾಚಿದೇವರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಧ‍್ಯಾಹ್ನ 2.30 ಕ್ಕೆ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಮೈದಾನದಲ್ಲಿ ಗುಡ್ಡಗಾಡು ಆದಿವಾಸಿಗಳಿಗೆ ಪೌಷ್ಠಿಕ ಆಹಾರ ವಿತರಣೆ ಮತ್ತು ಅರಣ್ಯ ಹಕ್ಕುಪತ್ರಗಳ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ನಂತರ ಸಂಜೆ 6.30 ಕ್ಕೆ ಮೈಸೂರು ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.

Leave a Reply

comments

Related Articles

error: