ಸುದ್ದಿ ಸಂಕ್ಷಿಪ್ತ

ಏ.16 ರಂದು ನ್ಯಾಯಬೆಲೆ ಅಂಗಡಿಗಳು ಕಡ್ಡಾಯವಾಗಿ ತೆರೆಯಲು ಸೂಚನೆ

ಹಾಸನ (ಏ.16): ಜಿಲ್ಲೆಯ ಎಲ್ಲಾ ನ್ಯಾಯಬೆಲೆ ಅಂಗಡಿಗಳಿಗೆ ಏ.16 ರಂದು ವಾರದ ರಜೆ ಇರುವುದಿಲ್ಲ. ಅಂದು ಎಲ್ಲಾ ನ್ಯಾಯಬೆಲೆ ಅಂಗಡಿಗಳು ಕಡ್ಡಾಯವಾಗಿ ಬಾಗಿಲು ತೆರೆದು ಬೆಳಗ್ಗೆ 7 ರಿಂದ ಮಧ್ಯಾಹ್ನ 12 ರವರೆಗೆ ಹಾಗೂ ಸಂಜೆ 4 ಗಂಟೆಯಿಂದ 8 ರವರೆಗೆ ತೆರೆದು ಆಹಾರಧಾನ್ಯಗಳನ್ನು ವಿತರಿಸಲು ಸೂಚಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ವ್ಯಾಪಕ ಪ್ರಚಾರ ನೀಡಲಾಗಿದೆ. ಆದಾಗ್ಯೂ ಪುನಃ ಸಾರ್ವಜನಿಕರ ಗಮನಕ್ಕೆ ತರಲಾಗುತ್ತಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: