ದೇಶ

ಟಿಕ್ ಟಾಕ್ ಮೇಲಿನ ನಿಷೇಧ ರದ್ದುಗೊಳಿಸಲು ಸುಪ್ರೀಂ ನಕಾರ

ನವದೆಹಲಿ,ಏ.16-ಟಿಕ್ ಟಾಕ್ ಆ್ಯಪ್ ನಿಷೇಧಿಸುವಂತೆ ಮದ್ರಾಸ್ ಉಚ್ಚ ನ್ಯಾಯಾಲಯ ಕೇಂದ್ರ ಸರ್ಕಾರಕ್ಕೆ ನೀಡಿರುವ ನಿರ್ದೇಶನ ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಇದು ಉಚ್ಚ ನ್ಯಾಯಾಲಯದ ಮಧ್ಯಂತರ ಆದೇಶ. ಪ್ರಕರಣವನ್ನು ಏ.16ರಂದು ವಿಚಾರಣೆ ನಡೆಸಲು ಉಚ್ಚ ನ್ಯಾಯಾಲಯ ಪರಿಗಣಿಸಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಅಶ್ಲೀಲ ಹಾಗೂ ಅಸಭ್ಯ ಅಂಶಗಳು ಲಭ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಮೊಬೈಲ್ ಆಯಪ್ ಟಿಕ್ಟಾಕ್ ನಿಷೇಧ ಹೇರುವಂತೆ ಮದ್ರಾಸ್ ಉಚ್ಚ ನ್ಯಾಯಾಲಯ ಕೇಂದ್ರಕ್ಕೆ ಏ.3ರಂದು ಮಧ್ಯಂತರ ನಿರ್ದೇಶನ ನೀಡಿತ್ತು. ಅಲ್ಲದೆ ಟಿಕ್ಟಾಕ್ ವೀಡಿಯೊಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ಸೂಚಿಸಿತ್ತು.

ಸಂಸ್ಕೃತಿಯನ್ನು ಕೆಳದರ್ಜೆಗೆ ಇಳಿಸುವ ಹಾಗೂ ಅಶ್ಲೀಲತೆಗೆ ಉತ್ತೇಜನ ನೀಡುತ್ತಿರುವ ಅಂಶಗಳನ್ನು ಒಳಗೊಂಡಿದೆ ಎಂದು ಹೇಳಲಾದ ಟಿಕ್ ಟಾಕ್ ಆ್ಯಪ್ ಗೆ ನಿಷೇಧ ವಿಧಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ದಾವೆ ಕುರಿತು ಉಚ್ಚ ನ್ಯಾಯಾಲಯ ಇತ್ತೀಚೆಗೆ ಮಧ್ಯಂತರ ಆದೇಶ ಜಾರಿ ಮಾಡಿತ್ತು. (ಎಂ.ಎನ್)

Leave a Reply

comments

Related Articles

error: