ದೇಶ

ಮಾಯಾವತಿ ಮೇಲಿನ ಪ್ರಚಾರ ನಿಷೇಧ ತೆರವಿಗೆ ಸುಪ್ರೀಂ ನಕಾರ

ನವದೆಹಲಿ,.16- ಬಿಎಸ್ಪಿ ನಾಯಕಿ ಮಾಯಾವತಿಗೆ ಚುನಾವಣಾ ಆಯೋಗ ವಿಧಿಸಿದ್ದ ಪ್ರಚಾರ ನಿಷೇಧವನ್ನು ತೆರವುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಬಿಎಸ್ಪಿ ಅಧ್ಯಕ್ಷೆ ಮಾಯಾವತಿಗೆ 48 ಗಂಟೆಗಳ ಕಾಲ ಚುನಾವಣಾ ಪ್ರಚಾರಕ್ಕೆ ಚುನಾವಣಾ ಆಯೋಗ ನಿಷೇಧ ವಿಧಿಸಿತ್ತು.

ನಿಷೇಧವನ್ನು ಹಿಂಪಡೆಯುವಂತೆ ಕೋರಿ ಮಾಯಾವತಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಮಾಯಾವತಿ ಮನವಿಯನ್ನು ನಿರಾಕರಿಸಿರುವ ನ್ಯಾಯಾಲಯ ಚುನಾವಣಾ ಆಯೋಗದ ನಿರ್ಧಾರ ಸರಿ ಇದೆ ಎಂದು ಹೇಳಿದೆ.

ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​, ಪ್ರಚೋದನಾಕಾರಿ ಭಾಷಣ ಮಾಡುವ ರಾಜಕಾರಣಿಗಳ ವಿರುದ್ಧ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗಕ್ಕೆ ಅಧಿಕಾರ ಇದೆ. ಅಧಿಕಾರವನ್ನು ಬಳಸಿಕೊಂಡು ಪ್ರಭಾವಿ ರಾಜಕಾರಣಿಗಳ ವಿರುದ್ಧ ಮೊದಲ ಬಾರಿ ಆಯೋಗ ಕ್ರಮ ಕೈಗೊಂಡಿದೆ. ಇದಕ್ಕಾಗಿ ಆಯೋಗವನ್ನು ಅಭಿನಂದಿಸುತ್ತೇವೆ ಎಂದು ಹೇಳಿ ಮಾಯಾವತಿ ಅರ್ಜಿಯನ್ನು ತಿರಸ್ಕರಿಸಿತು.

ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ಮತ್ತು ಮಾಜಿ ಸಿಎಂ ಮಾಯಾವತಿ ಪ್ರಚೋದನಕಾರಿ ಭಾಷಣ ಮಾಡಿರುವುದಾಗಿ ಆರೋಪಿಸಿ ಸುಪ್ರೀಂ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು.

ಇದರ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ಇವರಿಬ್ಬರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿತ್ತು. ಅದರಂತೆ ಆಯೋಗವು ಯೋಗಿ ಆದಿತ್ಯನಾಥ್ಅವರಿಗೆ 72 ಗಂಟೆ ಮತ್ತು ಮಾಯಾವತಿಗೆ 48 ಗಂಟೆ ಚುನಾವಣಾ ಪ್ರಚಾರ ಮಾಡದಂತೆ ನಿರ್ಬಂಧಿಸಿ ಸೋಮವಾರ ಆದೇಶಿಸಲಾಗಿತ್ತು. (ಎಂ.ಎನ್)

Leave a Reply

comments

Related Articles

error: