ಕರ್ನಾಟಕಮೈಸೂರು

ಸಿದ್ದರಾಮಯ್ಯ ರಿಲ್ಯಾಕ್ಸ್ ಮೂಡ್: ಕಾರಿನಲ್ಲೇ ಕುಳಿತು ದೋಸೆ ಸೇವನೆ

ಮೈಸೂರು (ಏ.18): ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದ್ದು, ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬವಾದ ಈ ಪ್ರಕ್ರಿಯೆಯಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸುವ ಮೂಲಕ ಸಂಭ್ರಮದಿಂದ ಪಾಲ್ಗೊಳ್ಳುತ್ತಿದ್ದಾರೆ.

ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಮಾತ್ರ ತಮ್ಮ ಭವಿಷ್ಯ ಏನಾಗುತ್ತದೋ ಎಂಬ ಆತಂಕದಲ್ಲೇ ಮತಗಟ್ಟೆಗಳಿಗೆ ತೆರಳಿ ಅಂತಿಮ ಹಂತದ ಪ್ರಚಾರ ನಡೆಸುತ್ತಿದ್ದಾರೆ. ಪ್ರಮುಖ ಪಕ್ಷಗಳ ನಾಯಕರಿಗೂ ಈ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದು ಅಭ್ಯರ್ಥಿಗಳ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದಾರೆ.

ಇಷ್ಟೆಲ್ಲಾ ಒತ್ತಡಗಳ ಮಧ್ಯೆಯೂ ಮಾಜಿ ಮುಖ್ಯಮಂತ್ರಿ, ದೋಸ್ತಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಇಂದು ಬೆಳಿಗ್ಗೆ ಮೈಸೂರಿನಲ್ಲಿ ಕಾರಿನಲ್ಲಿ ಕುಳಿತೇ ದೋಸೆ ಸವಿದಿದ್ದಾರೆ. ಈ ಸಂದರ್ಭದಲ್ಲಿ ಹಲವರು ಸಿದ್ದರಾಮಯ್ಯನವರ ಜೊತೆ ಸೆಲ್ಫಿ ತೆಗೆಸಿಕೊಳ್ಳಲು ಮುಂದಾಗಿದ್ದು, ರಿಲ್ಯಾಕ್ಸ್ ಮೂಡಿನಲ್ಲಿರುವ ಅವರು ಸೆಲ್ಫಿ ತೆಗೆಸಿಕೊಂಡಿದ್ದಾರೆ. (ಎನ್.ಬಿ)

Leave a Reply

comments

Related Articles

error: