ಪ್ರಮುಖ ಸುದ್ದಿ

ಬಂಡೀಪುರ ಹುಲಿ ಮೀಸಲು ಅರಣ್ಯದಲ್ಲಿ ರಾತ್ರಿ ವೇಳೆ ಸಂಚಾರ ನಿರ್ಬಂಧ ರಾಹುಲ್ ಗಾಂಧಿ ಹೇಳಿಕೆಗೆ ವನ್ಯ ಜೀವಿ ತಜ್ಞರ ಟೀಕೆ

ರಾಜ್ಯ(ಬೆಂಗಳೂರು)ಏ.19:- ಬಂಡೀಪುರ ಹುಲಿ ಮೀಸಲು ಅರಣ್ಯದಲ್ಲಿ ರಾತ್ರಿ ವೇಳೆ ಸಂಚಾರಕ್ಕೆ ನಿರ್ಬಂಧ ಕುರಿತ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆಗೆ ವನ್ಯ ಜೀವಿ ತಜ್ಞರು ಕಟುವಾಗಿ ಟೀಕಿಸಿದ್ದಾರೆ.

ರಾಹುಲ್ ಗಾಂಧಿಯವರಿಗೆ ಎರಡೂ ರಾಜ್ಯಗಳ ನಡುವೆ ನಡೆಯುತ್ತಿರುವ ಹೋರಾಟದ ಕುರಿತು ಅರಿವಿಲ್ಲ ಎನ್ನುತ್ತಾರೆ ತಜ್ಞರು. ಬಂಡೀಪುರ ಹುಲಿ ಅಭಯಾರಣ್ಯದಲ್ಲಿನ ರಾತ್ರಿ ಸಂಚಾರ ನಿರ್ಬಂಧ ಸಮಸ್ಯೆ ಕುರಿತು ಗಮನ ಹರಿಸಲಾಗುವುದು ಎಂದು ರಾಹುಲ್ ಗಾಂಧಿ ವಯನಾಡಿನಲ್ಲಿ ರ್ಯಾಲಿಯ ವೇಳೆ ಹೇಳಿದ್ದರು. ಕಳೆದ ಎಂಟು ವರ್ಷಗಳಿಂದಲೂ ಬಂಡೀಪುರ ಮೂಲಕ ಹಾದು ಹೋಗುವ ಹೆದ್ದಾರಿಯಲ್ಲಿ ರಾತ್ರಿ ವೇಳೆ ಸಂಚಾರಕ್ಕೆ ನಿರ್ಬಂಧವಿದ್ದ, ಕರ್ನಾಟಕ ಸರ್ಕಾರ ಬದಲಿ ಮಾರ್ಗ ನೀಡಿತ್ತು. ಇದು ಹಗಲು-ರಾತ್ರಿ ತೆರೆದಿರುತ್ತದೆ. ವನ್ಯಜೀವ ಸಂರಕ್ಷಣೆಯ ದೃಷ್ಟಿಯಿಂದ ಈ ವಿಚಾರದಲ್ಲಿ ಮುಂದುವರಿಯದಂತೆ ಒತ್ತಾಯಿಸಬೇಕು ಎಂದಿದ್ದಾರೆ ವನ್ಯಜೀವಿ ತಜ್ಞರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: