ಕರ್ನಾಟಕ

ಇಂಜಿನಿಯರಿಂಗ್ ವಿದ್ಯಾರ್ಥಿನಿಯ ಸಾವನ್ನು ಖಂಡಿಸಿದ ಸ್ಯಾಂಡಲ್ ವುಡ್ ತಾರೆಯರು

ಬೆಂಗಳೂರು,ಏ.20-ರಾಯಚೂರು ಇಂಜಿನಿಯರಿಂಗ್ ವಿದ್ಯಾರ್ಥಿನಿಯ ಅನುಮಾನಸ್ಪಾದ ಸಾವಿಗೆ ಇದೀಗ ಎಲ್ಲೆಡೆ ತೀವ್ರ ಖಂಡನೆ ವ್ಯಕ್ತವಾಗಿದೆ. ಸಿನಿಮಾ ತಾರೆಯರು, ರಾಜಕಾರಣಿಗಳೂ ಸೇರಿದಂತೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಟರಾದ ದರ್ಶನ್, ಸತೀಶ್ ನೀನಾಸಂ, ನಿರ್ದೇಶಕ ಯೋಗರಾಜ್ ಭಟ್, ನಟಿಯರಾದ ರಶ್ಮಿಕಾ ಮಂದಣ್ಣ, ರಕ್ಷಿತಾ ಪ್ರೇಮ್, ಹರ್ಷಿಕಾ ಪೂಣಚ್ಛ ಸೇರಿದಂತೆ ಹಲವರು ಖಂಡಿಸಿದ್ದಾರೆ. ಪ್ರಕರಣದ ಕುರಿತು ಸೂಕ್ತ ತನಿಖೆಯಾಗಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂಬ ಒತ್ತಾಯ ಕೇಳಿ ಬರುತ್ತಿದೆ.

ನಿರ್ದೇಶಕ ಯೋಗರಾಜ್ ಭಟ್ ಅವರು, ಈ ಕುರಿತು ಭಾವನಾತ್ಮಕ ಪತ್ರವೊಂದನ್ನು ಬರೆದಿದ್ದಾರೆ. ‘ವಿಕೃತನೊಬ್ಬನ ಕೆಲಸಕ್ಕೆ ಹೂವೊಂದು ಸುಟ್ಟು ಹೋಗಿದೆ. ಎಲ್ಲ ಕಡೆಗೆ ಮರುಕ ಮಡುಗಟ್ಟುತ್ತಿದೆ ‘()’ ಎಂಬ ಅಮಾಯಕಿ ಕೊಲೆಗೆ. ಇದೇ ರೀತಿಯ ಕೃತ್ಯ ದೆಹಲಿಯಲ್ಲಿ ನಡೆದಾಗ ಇಡೀ ಭಾರತ ಕೂಗಿತು. ಆದರೆ ನಮ್ಮ ರಾಜಧಾನಿ ಬೆಂಗಳೂರು ಮಾತ್ರ ಮೊನ್ನೆಯಿಂದಲೂ ಪ್ರತಿಕ್ರಿಯೆ ನೀಡಲು, ಮಾತನಾಡಲು ಮನಸ್ಸು ಮಾಡುತ್ತಿಲ್ಲ. ಹೋಗಲಿ ಏನೋ ವೋಟು ಹಾಕುವ ಕೆಲಸ ಇತ್ತು ಅನ್ನುವುದಾದರೆ ಅದೂ ಇಲ್ಲ. ಶೇ.45 ರಷ್ಟು ಜನ ಮಾತ್ರ ಮತ ಹಾಕಿದ್ದಾರೆ. ಬಾಕಿ ಜನರು ದಿವ್ಯ ನಿದ್ದೆಯಲ್ಲಿದ್ದಾರಾ? ಯಾರು ಎಬ್ಬಿಸುವುದು ಇವರನ್ನು? () ಆತ್ಮಕ್ಕೆ ನೆಮ್ಮದಿ ಕೋರುವುದು ಪ್ರತಿಯೊಬ್ಬರ ಕರ್ತವ್ಯ ಅಲ್ಲವೇ? ಯಾರ ಮನೆಯ ಮಗುವಾದರೇನು ಸಾವೆಂಬ ಸಂಕಟ ಎಲ್ಲರಿಗೂ ತೀವ್ರವಾಗಿ ಕಾಡಬೇಕಲ್ಲವೇ? ದಯಮಾಡಿ ಈ ಮಾನಭಂಗ ಕೊಲೆಯಂತಹ ವಿಕೃತಿಗಳನ್ನು ತಡೆಯಲು ತಡವಾದರೂ ಪರವಾಗಿಲ್ಲ ಕೊನೆ ಪಕ್ಷ ಪ್ರತಿಕ್ರಿಯಿಸಿ.. ಒಂದೇ ದನಿಯಲ್ಲಿ ಒಂಚೂರು ಆವೇಷದಲ್ಲಿ ಭವಿಷ್ಯದ ಹೂವುಗಳನ್ನು ಸುಡಲು ಬರುವ ಬೆಂಕಿಯನ್ನು ಒಂದೇ ಒಂದು ‘ಕಿಡಿ’ ಕೂಡ ಉಳಿಯದಂತೆ ನಂದಿಸಲು ಮುಂದಾಗಿ…()…ಕಂದಮ್ಮ…ನಿನಗೆ ನ್ಯಾಯ ನೀ ಇಲ್ಲದಿದ್ದರೂ..ಸಿಗಲಿ….ಹೋಗಿ ಬಾ ತಾಯಿ…’ ಎಂದು ಪತ್ರ ಬರೆದಿದ್ದಾರೆ.

ರಾಯಚೂರಿನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವಿನ ತನಿಖೆ ಅತೀ ಶೀಘ್ರದಲ್ಲಿ ಸರಿಯಾಗಿ ನಡೆದು ಇಂಥ ಅಮಾನುಷ ಕೃತ್ಯವನ್ನು ಎಸಗಿರುವ ಕೀಚಕರಿಗೆ ಕಾನೂನು ಬದ್ಧವಾಗಿ ತಕ್ಕ ಶಾಸ್ತಿಯಾಗಬೇಕೆಂದು ಕೋರಿಕೊಳ್ಳುತ್ತಿದ್ದೇನೆ. ಇನ್ನು ‘ಈ ರೇಪ್ ಮತ್ತು ಮರ್ಡರ್ ಕೃತ್ಯಕ್ಕೆ ಇನ್ನಷ್ಟು ಕಠಿಣವಾದ ಕಾನೂನು ನಮ್ಮ ದೇಶದಲ್ಲಿ ರೂಪುಗೊಳ್ಳಬೇಕು’ ಎಂದು ಟ್ವಿಟರ್ ಮೂಲಕ ಒತ್ತಾಯಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ಪ್ರತಿಕ್ರಿಯಿಸಿದ್ದು, ತಪ್ಪು ಯಾರೇ ಮಾಡಿದ್ದರೂ, ಅವರ ವಿರುದ್ಧ ಕ್ರಮ ಜರುಗಿಸಿ ಎಂದು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.

ರಾಯಚೂರಿನ ಮಾಣಿಕ್ ಪ್ರಭು ದೇವಸ್ಥಾನದ ಗುಡ್ಡದಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿತ್ತು. ಏ.16ರಂದು ಈ ಪ್ರಕರಣ ಬೆಳಕಿಗೆ ಬಂದಿದ್ದು, ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. (ಎಂ.ಎನ್)

Leave a Reply

comments

Related Articles

error: