ಪ್ರಮುಖ ಸುದ್ದಿ

ಶ್ರೀಲಂಕಾಗೆ ಪ್ರವಾಸಕ್ಕೆ ತೆರಳಿದ್ದ ರಾಜ್ಯದ ಜೆಡಿಎಸ್ ನ 7 ಮುಖಂಡರು ನಾಪತ್ತೆ ?

ರಾಜ್ಯ(ಬೆಂಗಳೂರು)ಏ.22:- ಶ್ರೀಲಂಕಾದ ಕೊಲೊಂಬೋದಲ್ಲಿ ನಡೆದ ಸರಣಿ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಶ್ರೀಲಂಕಾಗೆ ಪ್ರವಾಸಕ್ಕೆ ತೆರಳಿದ್ದ ರಾಜ್ಯದ ಜೆಡಿಎಸ್ ನ 7 ಮುಖಂಡರು ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಹೊರ ಬಿದ್ದಿದೆ.

ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಮುಗಿಸಿ ಶ್ರೀಲಂಕಾಕ್ಕೆ ಪ್ರವಾಸಕ್ಕೆಂದು ತೆರಳಿದ್ದ ಏಳು ಮಂದಿ ಜೆಡಿಎಸ್ ಮುಖಂಡರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಜೆಡಿಎಸ್ ಮುಖಂಡರಾದ ನೆಲಮಂಗಲ ಶಿವಣ್ಣ, ಮುನಿಯಪ್ಪ, ಲಕ್ಷ್ಮೀನಾರಾಯಣ, ಬೆಂಗಳೂರಿನ ಹನುಮಂತರಾಯಪ್ಪ, ತುಮಕೂರಿನ ರಮೇಶ್, ಬೆಂಗಳೂರು ಉತ್ತರ ತಾಲೂಕಿನ ನಿವಾಸಿ ಮಾರೇಗೌಡ, ಪುಟ್ಟರಾಜು ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇವರು ಚಿಕ್ಕಬಳ್ಳಾಪುರದಲ್ಲಿ ಕ್ಷೇತ್ರದ ಅಭ್ಯರ್ಥಿ ವೀರಪ್ಪ ಮೊಯ್ಲಿ ಅವರ ಪರ ಪ್ರಚಾರ ನಡೆಸಿ ಮತದಾನ ಮಾಡಿ ಏಪ್ರಿಲ್ 20ರಂದು ಬೆಂಗಳೂರಿನಿಂದ ಶ್ರೀಲಂಕಾಕ್ಕೆ ತೆರಳಿದ್ದರು ಎನ್ನಲಾಗಿದೆ. ಶ್ರೀಲಂಕಾದ ಕೊಲೊಂಬೊದಲ್ಲಿ  ನಡೆದ ಸರಣಿ ಬಾಂಬ್ ಸ್ಫೋಟದ  ಬಳಿಕ ಏಳು ಮಂದಿ ನಾಪತ್ತೆಯಾಗಿರುವುದು ಆತಂಕ ಮೂಡಿಸಿದೆ.

ಇದಕ್ಕೂ ಮುನ್ನ ಕುಟುಂಬಸ್ಥರಿಗೆ ಕರೆ ಮಾಡಿ ಶ್ಯಾಂಗ್ರಿಲಾ ಹೋಟೆಲ್‌ನಲ್ಲಿಯೇ ಉಳಿದುಕೊಂಡಿರುವುದಾಗಿ ಹೇಳಿದ್ದರು ಎನ್ನಲಾಗಿದೆ. ಆದರೆ ಬಾಂಬ್ ಸ್ಪೋಟದ ಬಳಿಕ ಇದುವರೆಗೂ ಅವರು ಸಂಪರ್ಕಕ್ಕೆ ಸಿಕ್ಕಿಲ್ಲ ಎನ್ನಲಾಗುತ್ತಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: