ಮೈಸೂರು

ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್ ಹತ್ಯೆ ಖಂಡಿಸಿ ಪ್ರತಿಭಟನೆ

ಮೈಸೂರು,ಏ.22:- ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್ ಹತ್ಯೆ ಖಂಡಿಸಿ  ಮೈಸೂರಿನ ನ್ಯಾಯಾಲಯದ ಮುಂಭಾಗ ಇಂದು  ಗಂಧದ ಗುಡಿ ಫೌಂಡೇಶನ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಆರೋಪಿಗಳನ್ನು ಗಲ್ಲಿಗೇರಿಸುವಂತೆ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಮಾತನಾಡಿದ ಪ್ರತಿಭಟನಾಕಾರರು  ರಾಯಚೂರಿನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಮಧು ಪತ್ತಾರ್ ಘಟನೆಗೆ ಸಂಬಂಧಿಸಿದ ಆರೋಪಿಗಳನ್ನು ಕೂಡಲೇ ಬಂಧಿಸಿ ಸೂಕ್ತ ಶಿಕ್ಷೆ ನೀಡಬೇಕು. ಇನ್ನು ಮುಂದೆ ಇನ್ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ  ಗಂಧದಗುಡಿ ಫೌಂಡೇಶನ್ ಆರ್ಯನ್, ನಯನ ಗೌಡ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: