ಸುದ್ದಿ ಸಂಕ್ಷಿಪ್ತ

ಬಾಲಭವನದಿಂದ ಹಾಸನದಲ್ಲಿ ಮಕ್ಕಳ ಬೇಸಿಗೆ ಶಿಬಿರ

ಹಾಸನ (ಏ.23): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರಿಗೆ ಜಿಲ್ಲಾ ಬಾಲಭವನ ಸೊಸೈಟಿ, ಬೆಂಗಳೂರು ಇವರು ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರವನ್ನು ಏರ್ಪಡಿಸಿ ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳನ್ನು ಏರ್ಪಡಿಸಿ, ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಜಿಲ್ಲಾ ಬಾಲಭವನದ ವತಿಯಿಂದ ಪ್ರತಿ ವರ್ಷ 05-14 ವರ್ಷದ ಮಕ್ಕಳಿಗೆ ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ತರಬೇತಿ ನೀಡುವ ನಿಟ್ಟಿನಲ್ಲಿ ಏ.26 ರಿಂದ ಮೇ 09 ರವರೆಗೆ ಜಿಲ್ಲಾ ಸ್ತ್ರೀಶಕ್ತಿ ಭವನ, ಆಡುವಳ್ಳಿ, ಹಾಸನ ಇಲ್ಲಿ ಬೇಸಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಮಕ್ಕಳಲ್ಲಿ ಹುದುಗಿರುವ ಬಾಲ ಪ್ರತಿಭೆಯನ್ನು ಹೊರ ತರಲು ಅನುಕೂಲವಾಗುವಂತೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸರ್ಕಾರಿ ಶಾಲಾ ಮಕ್ಕಳು ಹಾಗೂ ಆರ್ಥಿಕವಾಗಿ ಹಿಂದುಳಿದ ಪೋಷಕರು ಮಕ್ಕಳನ್ನು ಬೇಸಿಗೆ ಶಿಬಿರಕ್ಕೆ ನೋಂದಾಯಿಸಬಹುದು. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 9ನೇ ಕ್ರಾಸ್, ಕೆ.ಆರ್.ಪುರಂ, ಹಾಸನ ಇವರನ್ನು ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ:08172-267218ನ್ನು ಹಾಗೂ ಏ.25ರ ಒಳಗೆ ನೋಂದಾಯಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: