ದೇಶ

ದಕ್ಷಿಣ ದಿಲ್ಲಿಯಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿಜೇಂದರ್ ಸಿಂಗ್ ಸ್ಪರ್ಧೆ

ನವದೆಹಲಿ,ಏ.23-ರಾಷ್ಟ್ರರಾಜಧಾನಿಯ ದಕ್ಷಿಣ ದಿಲ್ಲಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಾಕ್ಸರ್ ವಿಜೇಂದರ್ ಸಿಂಗ್ ಸ್ಪರ್ಧಿಸಲಿದ್ದಾರೆ.

ಸೋಮವಾರ ರಾತ್ರಿ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದ ಏಳು ಅಭ್ಯರ್ಥಿಗಳ ಪಟ್ಟಿಯಲ್ಲಿ ವಿಜೇಂದ್ರ ಸಿಂಗ್ ಹೆಸರಿದೆ. ದೆಹಲಿಯಲ್ಲಿ ಮೇ 12ರಂದು ಮತದಾನ ನಡೆಯಲಿದೆ.

ಈ ಬಗ್ಗೆ ಟ್ವಿಟ್ ಮಾಡಿರುವ ವಿಜೇಂದರ್ ಸಿಂಗ್ ತನಗೆ ಅವಕಾಶ ನೀಡಿರುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾರಿಗೆ ಕೃತಜ್ಞತೆ ಸಲ್ಲಿಸುವೆ. 20 ವರ್ಷಗಳ ಬಾಕ್ಸಿಂಗ್ ವೃತ್ತಿಜೀವನದಲ್ಲಿ ದೇಶಕ್ಕೆ ಹೆಮ್ಮೆ ತರುವ ಕೆಲಸ ಮಾಡಿದ್ದೇನೆ. ಇದೀಗ ನನ್ನ ದೇಶದಲ್ಲಿ ಸೇವೆ ಮಾಡುವ ಅವಕಾಶ ಲಭಿಸಿದೆ ಎಂದಿದ್ದಾರೆ.

ಭಾರತದಲ್ಲಿ ಬಾಕ್ಸಿಂಗ್ ಹೆಚ್ಚು ಜನಪ್ರಿಯ ಕ್ರೀಡೆಯಾಗಲು ಮಹತ್ವದ ಕೊಡುಗೆ ನೀಡಿರುವ ಸಿಂಗ್‌ 2010ರಲ್ಲಿ ದೇಶದ ಮೂರನೇ ಉನ್ನತ ನಾಗರಿಕ ಗೌರವ ಪದ್ಮಶ್ರೀ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಒಲಿಂಪಿಕ್ಸ್ನಲ್ಲಿ ಪದಕ ಜಯಿಸಿದ್ದ ಭಾರತದ ಮೊದಲ ಬಾಕ್ಸರ್ ಎಂಬ ಕೀರ್ತಿ ವಿಜೇಂದರ್ ಸಿಂಗ್ ಗೆ ಸಲ್ಲುತ್ತದೆ.

ಮೂರು ಬಾರಿಯ ದೆಹಲಿ ಸಿಎಂ ಶೀಲಾ ದೀಕ್ಷಿತ್ ಕೂಡಾ ಈ ಬಾರಿ ದೆಹಲಿಯಲ್ಲಿ ಸ್ಪರ್ಧಿಸಲಿದ್ದಾರೆ. ಶೀಲಾ ದೀಕ್ಷಿತ್ ಈಶಾನ್ಯ ದೆಹಲಿಯಿಂದ ಸ್ಪರ್ಧಿಸುವ ಸಾಧ್ಯತೆ ಇದೆ. ಕಾಂಗ್ರೆಸ್ ಪಟ್ಟಿಯಲ್ಲಿ ಮಾಜಿ ಕೇಂದ್ರ ಸಚಿವ ಕಪಿಲ್ ಸಿಬಾಲ್ ಹೆಸರು ಇಲ್ಲ. ಇವರು ಚಾಂದನಿ ಚೌಕ್ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿದ್ದರು.

(ಎಂ.ಎನ್)

Leave a Reply

comments

Related Articles

error: