ಕರ್ನಾಟಕ

“ಸದ್ಯದಲ್ಲೇ ರಾಜೀನಾಮೆ ಕೊಡ್ತೇನೆ!”: ಮೈತ್ರಿ ಪಕ್ಷಗಳಿಗೆ ಮತ್ತೆ ತಲೆಬಿಸಿ ತಂದ ರಮೇಶ್​ ಜಾರಕಿಹೊಳಿ?

ಬೆಳಗಾವಿ (ಏ.23): ಬೆಳಗಾವಿಯಲ್ಲಿ ಮತ್ತೆ ಜಾರಕಿಹೊಳಿ ಸಹೋದರರ ರಾಜಕೀಯ ಮೇಲಾಟ ಶುರುವಾಗಿದೆ. ಗೋಕಾಕ್​ ಮಾಜಿ ಶಾಸಕ ರಮೇಶ್​ ಜಾರಕಿಹೊಳಿ ತನ್ನ ಸಹೋದರ ಸತೀಶ್​ ಜಾರಕಿಹೊಳಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಜೊತೆಗೆ ಕಾಂಗ್ರೆಸ್​ ನಾಯಕರ ವಿರುದ್ದವೂ ಬಹಿರಂಗವಾಗಿ ಮತ್ತೊಮ್ಮೆ ಅಸಮಾಧಾನ ಹೊರಹಾಕಿದ್ದಾರೆ. ಇಷ್ಟೇ ಅಲ್ಲದೇ, ರಮೇಶ್​ ಜಾರಕಿಹೊಳಿ ಕಾಂಗ್ರೆಸ್​​ಗೆ ರಾಜೀನಾಮೆ ನೀಡುವುದಾಗಿ ತಿಳಿಸಿ ಮೈತ್ರಿ ಸರ್ಕಾರಕ್ಕೆ ಶಾಕ್​ ಕೊಟ್ಟಿದ್ದಾರೆ.

ಇಂದು ಬೆಳಗಾವಿಯಲ್ಲಿ ಮತ ಚಲಾಯಿಸಿದ ಬಳಿಕ ಮಾತನಾಡಿದ ರಮೇಶ್​ ಜಾರಕಿಹೊಳಿ, ತಮ್ಮ ಸಹೋದರ ‘ಸತೀಶ್​ ಜಾರಕಿಹೊಳಿಗೆ ತಲೆ ಕೆಟ್ಟಿದೆ’ ಎಂದು ಕಿಡಿಕಾರಿದ್ದಾರೆ. ಅಲ್ಲದೇ ಕಾಂಗ್ರೆಸ್​ ನಾಯಕರ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ ಅವರು, ಚುನಾವಣೆ ಬಳಿಕ ರಾಜೀನಾಮೆ ಕೊಡುವುದು ಖಚಿತ ಎಂದರು. ಕಾಂಗ್ರೆಸ್​​ಗೆ ರಾಜೀನಾಮೆ ನೀಡುವುದು ಪಕ್ಕಾ. ಶೀಘ್ರದಲ್ಲೇ ರಾಜೀನಾಮೆ ದಿನಾಂಕ ತಿಳಿಸುತ್ತೇನೆ ಎಂದು ಹೇಳಿದರು.

ನಾನು ರಾಜೀನಾಮೆ ನೀಡುವುದು ಪಕ್ಕಾ. ಯಾವಾಗ ಅಂತ ಇನ್ನೂ ನಿರ್ಧಾರ ಮಾಡಿಲ್ಲ. ಆ ನಂತರ ಬೇರೆ ಪಕ್ಷಕ್ಕೆ ಹೋಗುತ್ತೇನೆ. ಈವರೆಗೆ ಕಾಂಗ್ರೆಸ್​​ ನಾಯಕರು ಯಾರೂ ನನ್ನನ್ನು ಸಂಪರ್ಕ ಮಾಡಿಲ್ಲ. ಕೇವಲ ತಾಂತ್ರಿಕವಾಗಿ ಅಷ್ಟೇ ನಾನು ಕಾಂಗ್ರೆಸ್​ ಪಕ್ಷದಲ್ಲಿ ಇದ್ದೇನೆ ಎಂದರು. (ಎನ್.ಬಿ)

Leave a Reply

comments

Related Articles

error: