ಸುದ್ದಿ ಸಂಕ್ಷಿಪ್ತ

ಏಪ್ರಿಲ್ 24 ರಂದು ಡಾ.ರಾಜ್‍ಕುಮಾರ್ ಜಯಂತಿ

ಮಂಡ್ಯ (ಏ.23): ಡಾ.ರಾಜ್‍ಕುಮಾರ್ ರವರ ಜನ್ಮ ದಿನಾಚರಣೆಯನ್ನು ಲೋಕಸಭಾ ಸಾರ್ವತ್ರಿಕ ಚುನಾವಣೆ-2019ರ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಏಪ್ರಿಲ್ 24 ರಂದು ಬೆಳಿಗ್ಗೆ 11 ಗಂಟೆ ಸರಳವಾಗಿ ಆಚರಿಸಲಾಗುತ್ತಿದ್ದು ಡಾ. ರಾಜ್‍ಕುಮಾರ್ ರವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿಗಳು ಮಾಲಾರ್ಪಣೆ ಮಾಡುವ ಮೂಲಕ ಆಚರಿಸಲಾಗುವುದು. ಕಾರ್ಯಕ್ರಮಕ್ಕೆ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: