ಸುದ್ದಿ ಸಂಕ್ಷಿಪ್ತ

6ನೇ ತರಗತಿ ಪ್ರವೇಶ : ಅರ್ಜಿ ಆಹ್ವಾನ

ಮೈಸೂರು ಏ.24:-  ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡಿ ಶೇ.60% ಕ್ಕಿಂತ ಹೆಚ್ಚು ಅಂಕಗಳೊಂದಿಗೆ ತೇರ್ಗಡೆಯಾಗಿರುವ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ  6 ನೇ ತರಗತಿಗೆ ಪ್ರವೇಶ ಕಲ್ಪಿಸಲು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಮೇ 2 ರೊಳಗಾಗಿ ಆಯಾ ತಾಲ್ಲೂಕಿನ ಪರಿಶಿಷ್ಟ ವರ್ಗದ ಕಲ್ಯಾಣಾಧಿಕಾರಿ ಕಚೇರಿ/ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿಯಿಂದ ಅರ್ಜಿ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸುವುದು ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0821-2427140 ಸಂಪರ್ಕಿಸಬಹುದು ಎಂದು ಮೈಸೂರು ಜಿಲ್ಲೆ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆ ತಿಳಿಸಿದ್ದಾರೆ.  (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: