ದೇಶಪ್ರಮುಖ ಸುದ್ದಿ

ಗುಜರಾತ್‍ನಲ್ಲಿ ಒಬ್ಬ ಮತದಾರನಿಗಾಗಿ ಒಂದು ಮತಗಟ್ಟೆ!

ಜುನಾಗಢ (ಏ.23): ಜುನಾಗಢದ ಗಿರ್​ಅರಣ್ಯ ಪ್ರದೇಶದಲ್ಲಿ ಆಗಾಗ ಕೇಳಿ ಬರುವ ಸಿಂಹ ಘರ್ಜನೆಯ ನಡುವೆ ಕೂಡಾ ಇಂದು ಮತದಾನ ಯಶಸ್ವಿಯಾಗಿದೆ. ಅರಣ್ಯವಾಸಿಯಾಗಿರುವ ಏಕೈಕ ಮತದಾರನಿಗಾಗಿ ಇಲ್ಲಿ ಮತಗಟ್ಟೆಯನ್ನು ತೆರೆಯಲಾಗಿತ್ತು.

‘No one is left behind’ ಎಂಬ ಧ್ಯೇಯದೊಂದಿಗೆ ಚುನಾವಣೆ ಪ್ರಕ್ರಿಯೆ ನಡೆಸುತ್ತಿರುವ ಚುನಾವಣಾ ಆಯೋಗವು ಗಿರ್ ಅರಣ್ಯ ಪ್ರದೇಶದಲ್ಲಿ ಏಕೈಕ ಮತದಾರನಿಗಾಗಿ ಮತಗಟ್ಟೆ ಹಾಗೂ ಸಮುದ್ರ ನಡುವೆ ಇರುವ ನಡುಗಡ್ಡೆಯಲ್ಲಿರುವ 40 ಮಂದಿಗಾಗಿ ವಿಶೇಷ ಮತಗಟ್ಟೆಯನ್ನು ಸ್ಥಾಪಿಸಿದ್ದು ವಿಶೇಷ.

ಗಿರ್ ಅರಣ್ಯ ಪ್ರದೇಶದ ಮತಗಟ್ಟೆಯಲ್ಲಿ ಮತದಾನ ಮಾಡಿದ ವ್ಯಕ್ತಿಯ ಹೆಸರು ಭರತ್ ದಾಸ್ ಬಾಪು. ದಟ್ಟಾರಣ್ಯದ ನಡುವೆ ಇರುವ ಪುರಾಣ ಪ್ರಸಿದ್ಧ ಬನೇಜ್ ದೇಗುಲದ ಬಳಿ ಈ ಮತಗಟ್ಟೆ ಸ್ಥಾಪಿಸುವುದು ಕಷ್ಟಕರವಾಗಿತ್ತು. ಈ ದೇಗುಲದ ಅರ್ಚಕರಾದ 62 ವರ್ಷ ವಯಸ್ಸಿನ ಮಹಾಂತ ಭರತ್ ದಾಸ್ ದರ್ಶನ್ ದಾಸ್ ಅವರು ಈ ದೇಗುಲಕ್ಕೆ ಮಹಾಭಾರತ ಕಾಲದ ನಂಟಿದೆ ಎಂದಿದ್ದಾರೆ. ಈ ಮತಗಟ್ಟೆಯಲ್ಲದೆ ಜಾಮ್ ನಗರದ ಓಖಾ ಕರಾವಳಿಯಿಂದ 30 ಕಿ.ಮೀ ದೂರದ ಸಮುದ್ರ ಮಧ್ಯ ಕಾಣಿಸುವ ಅಜಾದ್ ದ್ವೀಪದಲ್ಲಿ ಮತಗಟ್ಟೆ ಸ್ಥಾಪಿಸಿ, ಅಲ್ಲಿನ 40 ಮತದಾರರಿಗೆ ತಮ್ಮ ಹಕ್ಕು ಚಲಾಯಿಸಲು ಅನುವು ಮಾಡಿಕೊಳ್ಳಲಾಯಿತು.

ಭರತ್​ದಾಸ್​ಅವರು ಮತದಾನ ಮಾಡಿದ ಬಳಿಕ ಮಾತನಾಡಿದ ಅವರು, ಒಂದು ವೋಟ್​ಗಾಗಿ ಸರ್ಕಾರ ಸಾಕಷ್ಟು ಹಣವನ್ನು ವ್ಯಯಿಸಿದೆ. ನಾನು ಮತ ಚಲಾಯಿಸುವ ಮೂಲಕ ಇಲ್ಲಿ ಶೇ. ನೂರಕ್ಕೆ ನೂರು ಮತದಾನ ಮಾಡಿದಂತಾಗಿದೆ. ಇದೇ ರೀತಿ ಎಲ್ಲೆಡೆ ಮತದಾನವಾಗಬೇಕು. ಎಲ್ಲರಿಗೂ ನಾನು ಮನವಿ ಮಾಡಿಕೊಳ್ಳುತ್ತೇನೆ ಹೋಗಿ ಮತ ಚಲಾಯಿಸಿ ಎಂದು ಹೇಳಿದ್ದಾರೆ. (ಎನ್.ಬಿ)

Leave a Reply

comments

Related Articles

error: