ಕ್ರೀಡೆದೇಶ

ಸಚಿನ್ ತೆಂಡೂಲ್ಕರ್ ಗೆ 46ನೇ ಹುಟ್ಟುಹಬ್ಬದ ಸಂಭ್ರಮ: ಶುಭಾಶಯಗಳ ಮಹಾಪೂರ

ಮುಂಬೈ,ಏ.24-ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಗೆ ಇಂದು 46ನೇ ಹುಟ್ಟುಹಬ್ಬದ ಸಂಭ್ರಮ. ಸಚಿನ್ ಕುಟುಂಬ ಹಾಗೂ ಮುಂಬೈ ತಂಡದ ಜೊತೆ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ.

ಸಚಿನ್ ತೆಂಡೂಲ್ಕರ್ ಗೆ ಕ್ರಿಕೆಟಿಗರು, ಬಾಲಿವುಡ್ ಸೆಲೆಬ್ರೆಟಿಗಳು ಸೇರಿದಂತೆ ಗಣ್ಯರು, ಅಭಿಮಾನಿಗಳು ಟ್ವಿಟರ್ ಮೂಲಕ ಶುಭಾಶಯ ಕೋರಿದ್ದಾರೆ.

ಐಸಿಸಿ, ಬಿಸಿಸಿಐ, ಐಪಿಎಲ್, ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್, ವಿವಿಎಸ್ ಲಕ್ಷ್ಮಣ್, ವಿರೇಂದ್ರ ಸೆಹ್ವಾಗ್, ವಿರಾಟ್ ಕೊಹ್ಲಿ, ಅಜಿಂಕ್ಯಾ ರಹಾನೆ, ಕಿಡಾಂಬಿ ಶ್ರೀಕಾಂತ್, ಮೊಹಮ್ಮದ್ ಕೈಫ್, ರಾಹುಲ್ ಚಹರ್, ಹರ್ಸ್ಚೆಲ್ ಗಿಬ್ಸ್, ಕುಲದೀಪ್ ಯಾದವ್, ಚೇತೇಶ್ವರ್ ಪೂಜಾರ್, ಅಭಿಷೇಕ್ ಬಚ್ಚನ್ ಹೀಗೆ ಅನೇಕರು ಟ್ವಿಟ್ ಮಾಡಿ ಶುಭಾಶಯ ಕೋರಿದ್ದಾರೆ.

1989ರಲ್ಲಿ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದ ಸಚಿನ್ ತೆಂಡೂಲ್ಕರ್ 2013ರ ವರೆಗೆ ಟೀಂ ಇಂಡಿಯಾದ ಖಾಯಂ ಸದಸ್ಯನಾಗಿದ್ದರು. 200 ಟೆಸ್ಟ್ ಪಂದ್ಯ ಆಡಿದ ಏಕೈಕ ಕ್ರಿಕೆಟಿಗ ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿರೋ ಸಚಿನ್, 15921 ರನ್ ಸಿಡಿಸಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಗರಿಷ್ಠ ರನ್ ಸಿಡಿಸಿದ ದಾಖಲೆ ಬರೆದಿದ್ದಾರೆ. ಟೆಸ್ಟ್‌ನಲ್ಲಿ 51 ಶತಕ, 6 ದ್ವಿಶತಕ ಹಾಗೂ 68 ಅರ್ಧಶತಕ ಸಿಡಿಸಿದ್ದಾರೆ.

ಏಕದಿನದಲ್ಲಿ463 ಪಂದ್ಯ ಆಡಿರುವ ಸಚಿನ್ 18426 ರನ್ ಭಾರಿಸಿದ್ದಾರೆ. 49 ಶತಕ, 1 ದ್ವಿಶತಕ ಹಾಗೂ 96 ಅರ್ಧಶತಕ ಸಿಡಿಸಿದ್ದಾರೆ. 2011ರ ವಿಶ್ವಕಪ್ ಟೂರ್ನಿ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ ಸಚಿನ್ ತೆಂಡುಲ್ಕರ್, 2012ರಲ್ಲಿ ಏಕದಿನ ಕ್ರಿಕೆಟ್‌ಗೆ ವಿದಾಯ ಹೇಳಿದರು.

ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಪ್ರತಿನಿಧಿಸಿದ್ದ ಸಚಿನ್ ಇದೀಗ ಮೆಂಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. (ಎಂ.ಎನ್)

 

Leave a Reply

comments

Related Articles

error: