ಮೈಸೂರು

ಶ್ರೀಲಂಕಾದಲ್ಲಿ ಉಗ್ರರ ಬಾಂಬ್ ದಾಳಿ ಹಿನ್ನೆಲೆ : ಮೊಂಬತ್ತಿ ಬೆಳಗಿ ಶ್ರದ್ಧಾಂಜಲಿ ಅರ್ಪಣೆ

ಮೈಸೂರು,ಏ.25:- ಶ್ರೀಲಂಕಾದಲ್ಲಿ ಉಗ್ರರ ಬಾಂಬ್ ದಾಳಿ ಹಿನ್ನೆಲೆಯಲ್ಲಿ ಮೃತರ ಆತ್ಮಕ್ಕೆ ಶಾಂತಿ ಕೋರಿ ಮೈಸೂರಿನಲ್ಲಿ  ಕರ್ನಾಟಕ ಪ್ರಜಾ ಪಾರ್ಟಿ(ರೈತ ಪರ್ವ) ವತಿಯಿಂದ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಮೊಂಬತ್ತಿ ಬೆಳಗಿ ಕಾರ್ಯಕರ್ತರು ಶ್ರದ್ಧಾಂಜಲಿ ಅರ್ಪಿಸಿದರು. ಮೈಸೂರಿನ ಕೋರ್ಟ್ ಮುಂಭಾಗ ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಶ್ರದ್ಧಾಂಜಲಿ ಸಮರ್ಪಿಸಿ ಮೃತರ ಆತ್ಮಕ್ಕೆ ಶಾಂತಿ  ಸಿಗಲಿ ಎಂದು ಪ್ರಾರ್ಥಿಸಿದರು. ಉಗ್ರಗಾಮಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ನೆರೆ ರಾಷ್ಟ್ರಗಳು ಶ್ರೀಲಂಕಾ ದೇಶಕ್ಕೆ ನೆರವು ನೀಡುವಂತೆ ಮನವಿ ಮಾಡಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: