ಮೈಸೂರು

ವಿದ್ಯಾರ್ಥಿಗಳ ಬುದ್ಧಿಮಟ್ಟ ಹೆಚ್ಚಿಸಲು ಶಿಕ್ಷಕರು ಕಾರ್ಯಪ್ರವೃತ್ತರಾಗಬೇಕು : ಪ್ರೊ.ಹೆಚ್.ಕೆ.ಸೇನಾಪತಿ

ಶಿಕ್ಷಕರು ಹೆಚ್ಚು ಕಾರ್ಯಪ್ರವೃತ್ತರಾದರೆ ಮಾತ್ರ ವಿದ್ಯಾರ್ಥಿಗಳ ಬುದ್ಧಿಮಟ್ಟವನ್ನು ಹೆಚ್ಚಿಸಲು ಸಾಧ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಕೌನ್ಸಿಲ್ ನಿರ್ದೇಶಕ ಪ್ರೊ.ಹೆಚ್.ಕೆ.ಸೇನಾಪತಿ ಅಭಿಪ್ರಾಯಪಟ್ಟರು.

ಮೈಸೂರಿನ ಮಾನಸ ಗಂಗೋತ್ರಿಯ ಪ್ರಾದೇಶಿಕ ಶಿಕ್ಷಣ ಸಂಸ್ಥೆ ತಂತ್ರಜ್ಞಾನ ವಿಭಾಗದ ಎ.ವಿ.ಸಭಾಂಗಣದಲ್ಲಿ ಆಯೋಜಿಸಲಾದ ಮೂರು ದಿನಗಳ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಪ್ರೊ.ಹೆಚ್.ಕೆ.ಸೇನಾಪತಿ ಉದ್ಘಾಟಿಸಿದರು. ಬಳಿಕ  ಮಾತನಾಡಿದ ಅವರು ಪ್ರಸ್ತುತ ಶಿಕ್ಷಣದ ಗುಣಮಟ್ಟ ಹೆಚ್ಚುತ್ತಿದೆ. ಅದರೊಂದಿಗೆ ತಂತ್ರಜ್ಞಾನವೂ ಬೆಳೆಯುತ್ತಿದೆ.  ಶಿಕ್ಷಕರು ಪ್ರಸ್ತುತ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಇನ್ನೂ ಹೆಚ್ಚು ಕಾರ್ಯಪ್ರವೃತ್ತರಾಗಬೇಕು ಎಂದರು.

ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಕೌನ್ಸಿಲ್(ಎನ್‍ಸಿಇಆರ್‍ಟಿ)ನಿಂದ ವೆಬ್‍ಸೈಟ್‍ನಲ್ಲಿ ಇ-ಪಾಠಶಾಲಾ ಎಂಬ ಆಪ್ ಬಿಡುಗಡೆ ಮಾಡಲಾಗಿದ್ದು, ಮಕ್ಕಳ ಕಲಿಕೆಗೆ ಪೂರಕವಾಗಲಿದೆ ಎಂದರು.

ಈ ಸಂದರ್ಭ  ಎನ್‍ಸಿಇಆರ್‍ಟಿ ಜಂಟಿ ನಿರ್ದೇಶಕ ಪ್ರೊ. ರಾಜಾರಾಮ್ ಶರ್ಮಾ, ವಿಸ್ತರಣೆ ಶಿಕ್ಷಣ ಇಲಾಖೆ ಮುಖ್ಯಸ್ಥ ಪ್ರೊ.ವಿಶ್ವನಾಥ್  ಮತ್ತಿತರರು ಉಪಸ್ಥಿತರಿದ್ದರು.

ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಹಲವು ವಿಶ್ವವಿದ್ಯಾನಿಲಯಗಳಿಂದ ನೂರಕ್ಕೂ ಹೆಚ್ಚಿನ ಪ್ರತಿನಿಧಿಗಳು ಪಾಲ್ಗೊಂಡಿದ್ದಾರೆ.

Leave a Reply

comments

Related Articles

error: