ಮೈಸೂರು

ನಾಳೆ ಇಂಡಸ್ಟ್ರೀಯಲ್ ಏರಿಯಾ ಸೇರಿದಂತೆ ಹಲವು ಕಡೆ ವಿದ್ಯುತ್ ನಿಲುಗಡೆ

ಮೈಸೂರು ಏ.27:-   ಎನ್.ಆರ್ ಮೊಹಲ್ಲಾ ವಿಭಾಗದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ ಏಪ್ರಿಲ್ 28 ರಂದು ಭಾನುವಾರ ಬೆಳಿಗ್ಗೆ 10 ರಿಂದ ಸಂಜೆ 3 ಘಂಟೆಯವರೆಗೆ 66/11 ಕೆವಿ ಸೌತ್ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆ.ವಿ. ಇಂಡಸ್ಟ್ರೀಯಲ್ ಫೀಡರ್‍ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.

ಈ ಸಂಬಂಧ ಇಂಡಸ್ಟ್ರೀಯಲ್ ಏರಿಯಾ, ವಿಶ್ವೇಶ್ವರನಗರ 1, 2 ಮತ್ತು 3ನೇ ಹಂತ, ಧರ್ಮಸಿಂಗ್ ಕಾಲೋನಿ, ವಿದ್ಯಾರಣ್ಯಪುರಂ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಆದುದರಿಂದ ಸಾರ್ವಜನಿಕರು ಹಾಗೂ ಕೈಗಾರಿಕೋಧ್ಯಮಿಗಳು ಸಹಕರಿಸಬೇಕೆಂದು ಎನ್.ಆರ್ ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: