ಕರ್ನಾಟಕಪ್ರಮುಖ ಸುದ್ದಿ

ಈ ಬಾರಿ ಬಜೆಟ್‍ನಲ್ಲಿ ವಕೀಲರ ಗೌರವಧನ ಹೆಚ್ಚಳ: ಸಿಎಂ ಕುಮಾರಸ್ವಾಮಿ

ಬೆಂಗಳೂರು (ಏ.27): ಮುಂದಿನ ವರ್ಷದ ಬಜೆಟ್ ನಲ್ಲಿ ವಕೀಲರ ಗೌರವ ಧನ ಏರಿಕೆ ಮಾಡುವುದಾಗಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಬೆಂಗಳೂರು ವಕೀಲರ ಸಂಘ ಆಯೋಜಿಸಿದ್ದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಅವರಿಗೆ ಗೌರವ ಸಮರ್ಪಣೆ ಹಾಗೂ ಸಂಘದ ವಾರ್ಷಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದಾರೆ.

ಕಳೆದ ಬಜೆಟ್ ಸಂದರ್ಭದಲ್ಲಿಯೇ ವಕೀಲರಿಗೆ ನೀಡುತ್ತಿರುವ ಗೌರವ ಧನ ಏರಿಕೆ ಮಾಡುವಂತೆ ವಕೀಲರ ಸಂಘದ ಅಧ್ಯಕ್ಷರು ಪ್ರಸ್ತಾವನೆ ಸಲ್ಲಿಸಿದ್ದರು. ರೈತರ ಸಾಲ ಮನ್ನಾ ಮಾಡಿದ ಕಾರಣ ವಕೀಲರ ಗೌರವಧನ ಏರಿಕೆ ಮಾಡಲು ಸಾಧ್ಯವಾಗಿರಲಿಲ್ಲ. ಮುಂದಿನ ಬಜೆಟ್ ನಲ್ಲಿ ಏರಿಕೆ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ. ಕರ್ನಾಟಕದ ಸಿಜೆ ಆಗಿದ್ದ ನ್ಯಾ. ದಿನೇಶ್ ಮಹೇಶ್ವರಿ ಅವರ ಕೆಲವು ತೀರ್ಪುಗಳು ಸರ್ಕಾರದ ಕಣ್ಣು ತೆರೆಸಿವೆ. ಹಲವು ಸಂದರ್ಭದಲ್ಲಿ ಅವರನ್ನು ಭೇಟಿ ಮಾಡಿ ಸಲಹೆ ಪಡೆದುಕೊಂಡಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ನ್ಯಾ. ದಿನೇಶ್ ಮಹೇಶ್ವರಿ ಅವರನ್ನು ಗೌರವಿಸಲಾಯಿತು. ಹೈಕೋರ್ಟ್ ಹಂಗಾಮಿ ಸಿಜೆ ಎಲ್. ನಾರಾಯಣಸ್ವಾಮಿ, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ. ರಂಗನಾಥ್, ಅಡ್ವೊಕೇಟ್ ಜನರಲ್ ಉದಯ್ ಹೊಳ್ಳ ಮೊದಲಾದವರು ಇದ್ದರು. (ಎನ್.ಬಿ)

Leave a Reply

comments

Related Articles

error: