ಮೈಸೂರು

ಅನಿಲ ಸೋರಿಕೆ : ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ದುರಂತ

ಮನೆಯೊಂದರಲ್ಲಿ ಅನಿಲ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡು ದಟ್ಟ ಹೊಗೆ ಆವರಿಸಿದ್ದು,  ಸಂಭವಿಸಲಿದ್ದ ಭಾರೀ ದುರಂತವೊಂದು ನೆರೆಹೊರೆಯವರ ಹಾಗೂ ಪೊಲೀಸರ ಸಮಯಪ್ರಜ್ಞೆಯಿಂದ  ತಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಕುಂಬಾರಕೊಪ್ಪಲಿನ ಬಸ್ ನಿಲ್ದಾಣದ ಬಳಿ ಇರುವ ಮನೆಯೊಂದರಲ್ಲಿ ಈ ಅನಾಹುತ ಸಂಭವಿಸಿದೆ. ತಾಯಮ್ಮ ಹಾಗೂ ಆದರ್ಶ ಎಂಬವರು ಮನೆಯಿಂದ ಹೊರ ಹೋದ ವೇಳೆ ಮನೆಯಲ್ಲಿದ್ದ ಅಡುಗೆ ಅನಿಲ ಸೋರಿಕೆಯಾಗಿದ್ದು, ಬೆಂಕಿ ಕಾಣಿಸಿಕೊಂಡು ಮನೆಯ ಹೊರಗೆ ದಟ್ಟವಾದ ಹೊಗೆ ಆವರಿಸಿತ್ತು. ಇದನ್ನು ನೋಡಿದ ಅಕ್ಕಪಕ್ಕದ ಮನೆಯವರು ತಕ್ಷಣ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದರು. ಕೂಡಲೇ ಸ್ಥಳಕ್ಕಾಗಮಿಸಿದ ಸರಸ್ವತಿ ಪುರಂ ಅಗ್ನಿಶಾಮಕ ಠಾಣೆಯ ನಾಗರಾಜ್ ಅರಸ್ ನೇತೃತ್ವದ ಅಗ್ನಿಶಾಮಕ ತಂಡ ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿದೆ. ಬಳಿಕ ಮನೆಯ ಬಾಗಿಲು ತೆರೆದು ಅನಿಲ ಸೋರದಂತೆ ತಡೆಹಿಡಿಯಲಾಗಿದೆ.

ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

comments

Related Articles

error: